ಫೆಬ್ರವರಿ 17ರಂದು ಬಜೆಟ್‌ ಮಂಡನೆ ಸಾಧ್ಯತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲು ನಿರ್ಧರಿಸಿದ್ದು, ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದೆ.ಈ ತಿಂಗಳ 2ನೇ ವಾರದ ನಂತರ ಇಲಾಖಾವಾರು ಸಚಿವರು ಮತ್ತು ಅಧಿಕಾರಿಗಳ ಪ್ರಗತಿ ಪರಿಶೀಲನೆ ಆರಂಭವಾಗಲಿದೆ.ಜ.1ರಂದು ಹೊಸ ವರ್ಷದ ಶುಭಾಷಯ ಕೋರಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತಿತರರಿಗೆ ಬಜೆಟ್ ಮಂಡನೆಯ ಪೂರ್ವ ಸಿದ್ದತೆಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ ತಿಂಗಳ 2ನೇ ವಾರದಲ್ಲಿ ಪ್ರಸಕ್ತ ವರ್ಷದ ಜಂಟಿ ಅಧಿವೇಶನ ನಂತರ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಕಳೆದೆರಡು ವರ್ಷಗಳಿಂದ ಈ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿರುವ ಸರ್ಕಾರ ಜಂಟಿ ಅಧಿವೇಶನ ಮತ್ತು ಬಜೆಟ್ ಮಂಡನೆಯನ್ನು ಏಕಕಾಲದಲ್ಲಿ ನಡೆಸಲು ಮುಂದಾಗಿದೆ.ಫೆ16ರಂದು ಗುರುವಾರ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಸಿಎಂ ಬೊಮ್ಮಾಯಿ ಅವರು ಶುಕ್ರವಾರ ಬಜೆಟ್ ಮಂಡಿಸಿ ನಂತರ ಸೋಮವಾರದಿಂದ ಬಜೆಟ್ ಮೇಲೆ ಚರ್ಚೆ ಆರಂಭವಾಗಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

Wed Jan 4 , 2023
  ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.ಎಸ್.ಎಂ ಕೃಷ್ಣ 1999 […]

Advertisement

Wordpress Social Share Plugin powered by Ultimatelysocial