ಡಿ. 27 ರಂದು ವೇತನ ಸಹಿತ ರಜೆ ಘೋಷಣೆ

ಡಿ. 27 ರಂದು ವೇತನ ಸಹಿತ ರಜೆ ಘೋಷಣೆ: ಚುನಾವಣೆ ವ್ಯಾಪ್ತಿಯ ನೌಕರರಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ.

ಹಲವೆಡೆ ಪುರಸಭೆ, ನಗರಸಭೆ, ಗ್ರಾಮ ಪಂಚಾಯಿತಿ ಉಪ ಚುನಾವಣೆ, ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಉಪ ಚುನಾವಣೆ ಸಂಬಂಧ ಮತದಾನ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಎಸ್ಟಾಬ್ಲಿಶ್‍ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ.27ರ ಸೋಮವಾರ ದಂದು ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಛತ್ತೀಸ್‌ಗಡ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ ಜಯ, ಬಿಜೆಪಿಗೆ ಹಿನ್ನಡೆ

Fri Dec 24 , 2021
ರಾಯ್‌ಪುರ: ಛತ್ತೀಸ್‌ಗಡದ 15 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಮತ ಎಣಿಕೆ ಪೂರ್ಣಗೊಂಡ 300 ವಾರ್ಡ್‌ಗಳ ಪೈಕಿ 174ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. 89 ವಾರ್ಡ್‌ಗಳಲ್ಲಿ ಗೆದ್ದಿರುವ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಿನ್ನಡೆ ಅನುಭವಿಸಿದೆ. 15 ನಗರ ಸಂಸ್ಥೆಗಳು ಮತ್ತು 15 ಪ್ರತ್ಯೇಕ ವಾರ್ಡ್‌ಗಳ ಉಪಚುನಾವಣೆಯ ಮತದಾನ ಸೋಮವಾರ ನಡೆದಿತ್ತು. ಮತಎಣಿಕೆ ಕಾರ್ಯ ಗುರುವಾರ 29 ಕೇಂದ್ರಗಳಲ್ಲಿ ನಡೆಯಿತು. ಫಲಿತಾಂಶಗಳ ಕುರಿತು […]

Related posts

Advertisement

Wordpress Social Share Plugin powered by Ultimatelysocial