ಫಿಲಂ ಸಿಟಿ ನಿರ್ಮಾಣಕ್ಕಾಗಿ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಮುಖ್ಯಮಂತ್ರಿ ಮನವಿ.

ಸಾಂಸ್ಕೃತಿಕ ನಗರಿ ಮೈಸೂರು ಚಿತ್ರರಂಗದ ಗಣ್ಯರಿಗೆ ಅಚ್ಚುಮೆಚ್ಚಿನ ಊರು. ಚೆಂದದ ಊರಿನ ಆಸುಪಾಸಿನಲ್ಲಿ 250 ಕ್ಕೂ ಅಧಿಕ ಪ್ರೇಕ್ಷಣೀಯ ಸ್ಥಳಗಳಿದೆ. ಇಂತಹ ಭವ್ಯ ಪರಂಪರೆಯುಳ್ಳ ಐತಿಹಾಸಿಕ ನಗರಿಯಲ್ಲಿ ಫಿಲಂ ಸಿಟಿ ಸ್ಥಾಪಿಸಬೇಕೆಂಬುದು ಕನ್ನಡ ಚಿತ್ರರಂಗ ಮಾತ್ರವಲ್ಲದೆ ಹಲವು ಚಿತ್ರರಂಗದ ಗಣ್ಯರ ಅಭಿಪ್ರಾಯ.ಕೆಲವು ದಿನಗಳ ಹಿಂದೆ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ರಾಜೇಂದ್ರಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ, ಕೃಷ್ಣೇಗೌಡ ಅವರನ್ನು ಒಳಗೊಂಡ ಸಮಿತಿ ಸದಸ್ಯರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಹಲವು ವಿಷಯ ಚರ್ಚಿಸಿದ್ದರು. ಆಗ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣದ ವಿಷಯ ಕೂಡ ಪ್ರಸ್ತಾಪವಾಗಿತ್ತು. ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ರಿಪೋರ್ಟ್ ಸಿದ್ದ ಮಾಡಿಕೊಡುವಂತೆ ಹೇಳಿದ್ದರು.ಇಂದು (9.2.23) ಹಿರಿಯ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ಕೃಷ್ಣೇಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಲಾಯಿತು. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುವುದು ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್ ಹಾಗೂ ಡಾ||ಅಂಬರೀಶ್ ಅವರ ಕನಸ್ಸಾಗಿತ್ತು. ಅಷ್ಟೇ ಅಲ್ಲದೆ ಟಾಲಿವುಡ್, ಕಾಲಿವುಡ್, ಬಾಲಿವುಡ್ ಹಾಗೂ ಹಾಲಿವುಡ್ ನಟರು – ತಂತ್ರಜ್ಞರಿಗೂ ಮೈಸೂರು ಮೆಚ್ಚಿನ ತಾಣ. ಇಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರಕ್ಕೆ ಶಿವರಾಜಕುಮಾರ್, ರಾಕ್ ಲೈನ್ ವೆಂಕಟೇಶ್, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ ಸೇರಿದಂತೆ ಇಪ್ತತ್ತಕ್ಕೂ ಅಧಿಕ ಗಣ್ಯರು ಸಹಿ ಮಾಡಿದ್ದಾರೆ. ಬಾಲಿವುಡ್ ನ ಖ್ಯಾತ ನಟರಾದ ಧರ್ಮೇಂದ್ರ, ಹೇಮಮಾಲಿನಿ ಅವರು ಸಹ ಈ ಕುರಿತು ಸಹಿ‌ ಮಾಡಿ, ಲೆಟರ್ ಒಂದನ್ನು ಕಳುಹಿಸಿದ್ದಾರೆ‌. ಧರ್ಮೇಂದ್ರ ಅವರಿಗೂ ಮೈಸೂರು ಅಚ್ಚುಮೆಚ್ಚು. ಏಕೆಂದರೆ ಅವರ ವೃತ್ತಿಜೀವನ ಆರಂಭವಾಗಿದ್ದೆ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ ಎಂದು ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಎಂ ಟಿ ಸಿದ್ದೇಗೌಡ ಅವರು ಆಯ್ಕೆಯಾದರು

Thu Feb 9 , 2023
ಕೆ ಆರ್ ಪೇಟೆ ತಾಲೂಕಿನ ಅಕ್ಕೆಹೆಬ್ಬಾಳು ಹೋಬಳಿಯ ಮಾಂಬಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಕೆ ಟಿ ಪ್ರಕಾಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕಟ್ಟೆಕ್ಯಾತನಹಳ್ಳಿ ಅಂಜನಿಗೌಡ (ಪಾಪಣ್ಣ) 5 ಮತ ಪಡೆದು ಪರಾಜಿತರಾಗಿದ್ದಾರೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ,ಎಂ ಟಿ ಸಿದ್ದೇಗೌಡ 7 ಮತ ಪಡೆದು ಜಯಗಳಿಸಿ ನೂತನವಾಗಿ […]

Advertisement

Wordpress Social Share Plugin powered by Ultimatelysocial