ಬೈಕ್ ಸರ್ವಿಸ್ ಸೆಂಟರ್ ಗೆ ತಗುಲಿದ ಬೆಂಕಿ

ಬೈಕ್ ಸರ್ವಿಸ್ ಸೆಂಟರ್ ಗೆ ಬೆಂಕಿ ಬಿದ್ದು, 10 ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳದಲ್ಲಿ ನಡೆದಿದೆ.ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 10 ಲಕ್ಷ ಮೌಲ್ಯದ ಬೈಕ್ ಗಳು ಸುಟ್ಟುಹೋಗಿವೆ.ಶಹಾಪುರ ರಸ್ತೆಯಲ್ಲಿರೋ ಶಿವ ಸೇಲ್ ಬೈಕ್ ಸರ್ವಿಸ್ ಸೆಂಟರ್ ನಲ್ಲಿ ಅವಘಢ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬ್ಯಾನರ್ ಅಂಟಿಸಲು ಎಣಿ ಏರಿದ ಯುವಕ

Please follow and like us:

Leave a Reply

Your email address will not be published. Required fields are marked *

Next Post

ಬಸ್ ನಿಲ್ದಾಣ ಬಳಿ ಅನುಮಾನಾಸ್ಪದ ಮಹಿಳೆಯ ಶವ ಪತ್ತೆ

Tue Feb 9 , 2021
ರಾತ್ರಿ ಬಸ್ ನಿಲ್ದಾಣದಲ್ಲೇ ತಂಗಿದ್ದ ಮಹಿಳೆ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಯಾದಗಿರಿಯ ಜಿಲ್ಲೆಯ ಸುರಪುರ ನಗರದ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುಣಸಗಿ ತಾಲೂಕಿನ ಹೆಬ್ಬಾಳ ಗ್ರಾಮದ ಶಾಂತಾ ಶವದ ರೂಪದಲ್ಲಿ ಪತ್ತೆಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:ಬೈಕ್ ಸರ್ವಿಸ್ ಸೆಂಟರ್ ಗೆ ತಗುಲಿದ […]

Advertisement

Wordpress Social Share Plugin powered by Ultimatelysocial