ನಗುವಿನ ಹೂಗಳ ಮೇಲೆ ಮೊದಲ ಹಾಡು ರಿಲೀಸ್ – ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ.

ನಗುವಿನ ಹೂಗಳ ಮೇಲೆ ಮೊದಲ ಹಾಡು ರಿಲೀಸ್ – ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ  ‘ಆಮ್ಲೆಟ್’, ‘ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯ ಈ ಚಿತ್ರ ಪ್ರೇಕ್ಷಕರೆದುರು ಬರಲು ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಇದೀಗ ಸಿನಿಮಾ ತಂಡ ಚಿತ್ರದ ಮೊದಲ ಹಾಡನ್ನು   ನಲ್ಲಿ ಬಿಡುಗಡೆ ಮಾಡಿದೆ.

ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಅರಳಿರುವ ‘ಇರಲಿ ಬಿಡು ಈ ಜೀವ ನಿನಗಾಗಿ’ ರೋಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದೆ. ತಜೇಂಧರ್ ಸಿಂಗ್, ನಿಹಾರಿಕ ನಾಥ್ ‘ಇರಲಿ ಬಿಡು ಈ ಜೀವ ನಿನಗಾಗಿ’ ಹಾಡಿಗೆ ದನಿಯಾಗಿದ್ದು, ಲವ್ ಪ್ರಾನ್ ಮೆಹತಾ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದೆ. ಈ ಮೂಲಕ ಸಿನಿಮಾ ಪ್ರಚಾರ ಕಾರ್ಯವನ್ನು ಚಿತ್ರತಂಡ ಆರಂಭಿಸಿದೆ. ಸೆನ್ಸಾರ್ ಗೆ ರೆಡಿಯಾಗಿರುವ ಚಿತ್ರ ಏಪ್ರಿಲ್ ನಲ್ಲಿ ಬೆಳ್ಳಿ ಪರದೆ ಮೇಲೆ ಬರಲಿದೆ.

ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್, ಶರಣ್ಯ ಶೆಟ್ಟಿ ಚಿತ್ರದಲ್ಲಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ. ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ.

ಟಾಲಿವುಡ್ ನಲ್ಲಿ ಬೆಂಗಾಲ್ ಟೈಗರ್, ಪಂಥಂ, ಬಾಸ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಹು ನಿರೀಕ್ಷಿತ ಆಕ್ಷನ್, ಸಸ್ಪೆನ್ಸ್ ಥ್ರಿಲ್ಲರ್ "ಖೆಯೊಸ್" ಚಿತ್ರ ಫೆಬ್ರವರಿ 17 ರಂದು ತೆರೆಗೆ.

Sat Feb 4 , 2023
ಬಹು ನಿರೀಕ್ಷಿತ ಆಕ್ಷನ್, ಸಸ್ಪೆನ್ಸ್ ಥ್ರಿಲ್ಲರ್ “ಖೆಯೊಸ್” ಚಿತ್ರ ಫೆಬ್ರವರಿ 17 ರಂದು ತೆರೆಗೆ. ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ಯಶಸ್ವಿಯಾಗುತ್ತಿದೆ. ಉತ್ತಮ ಕಂಟೆಂಟ್ ವುಳ್ಳ “ಖೆಯೊಸ್” ಚಿತ್ರ ಕೂಡ ಇದೇ ಫೆಬ್ರವರಿ 17 ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಮಾಹಿತಿ ನೀಡಿದರು. ನಾನು ವೈದ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. “ಖೆಯೊಸ್” ಅಂದರೆ ಮನುಷ್ಯ ಮನಸ್ಸಿನಲ್ಲಾಗುವ ಗೊಂದಲ. ಇದು ವೈದ್ಯಕೀಯ […]

Advertisement

Wordpress Social Share Plugin powered by Ultimatelysocial