ಐದು ವರ್ಷದ ಪ್ರೀತಿ ಬೆಂಕಿಯಲ್ಲಿ ದಹನ: ಪ್ರಿಯಕರನನ್ನು ಹುಡುಕಿಕೊಂಡು ಬಂದ ಯುವತಿ ದುರಂತ ಸಾವು

ಬೆಂಗಳೂರು: ಐದು ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿಗೆ ಬೆಂಕಿ ಇಟ್ಟು ಹತ್ಯೆ ಮಾಡಿರುವ ಆರೋಪ ಪ್ರಿಯಕರನ ವಿರುದ್ಧ ಕೇಳಿಬಂದಿದೆ. ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ.

ದಾನೇಶ್ವರಿ ಮೃತ ಯುವತಿ. ಪ್ರಿಯಕರ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವಿಜಯಪುರದ ತಾಳೀಕೋಟೆ ಮೂಲದ ದಾನೇಶ್ವರಿ ಹಾಗೂ ಶಿವಕುಮಾರ್ 2018ರಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ವಿಜಯಪುರದ ಬಿಎಲ್​ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ವಿದ್ಯಾಭ್ಯಾಸದ ಬಳಿಕ ಶಿವಕುಮಾರ್​, ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರದ ಸ್ಟೇನ್​ ಲೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಇತ್ತೀಚೆಗೆ ದಾನೇಶ್ವರಿಯನ್ನು ಶಿವಕುಮಾರ್​ ಕಡೆಗಣಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಮದುವೆ ವಿಚಾರವಾಗಿಯೂ ಇಬ್ಬರ ನಡುವೆ ಗಲಾಟೆಯಾಗಿತ್ತು ಎಂದು ಹೇಳಲಾಗಿದೆ. ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಶಿವಕುಮಾರ್ ಕೆಲಸ ಮಾಡ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದಿದ್ದಳು. ಈ ವೇಳೆ ಮದುವೆಯ ವಿಚಾರದಲ್ಲಿ ಕಂಪನಿ ಮುಂದೆಯೇ ಇಬ್ಬರ ನಡುವೆ ಜಗಳವಾಗಿತ್ತು ಎಂದು ತಿಳಿದುಬಂದಿದೆ.

ಬಾಟಲ್​ನಲ್ಲಿ ಪೆಟ್ರೋಲ್ ತಂದು ದಾನೇಶ್ವರಿ ಮೇಲೆ ಎರಚಿ, ಬೆಂಕಿ ಹಚ್ಚಿರುವ ಆರೋಪ ಶಿವಕುಮಾರ್​ ವಿರುದ್ಧ ಕೇಳಿಬಂದಿದೆ. ಬೆಂಕಿ ಹಚ್ಚಿದ ಬಳಿಕ ದಾನೇಶ್ವರಿಯನ್ನು ತಾನೇ ಖಾಸಗಿ ಆಸ್ಪತ್ರೆಗೆ ದಾಖಲಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ದಾನೇಶ್ವರಿ ಮೃತಪಟ್ಟಿದ್ದಾಳೆಂದು ತಿಳಿದುಬಂದಿದೆ.

ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್​ 307 ಮತ್ತು ಎಸ್​ಸಿ-ಎಸ್​ಟಿ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಎರಡು ದಿನದ ಹಿಂದೆ ಈ ಹೀನ ಕೃತ್ಯ ನಡೆದಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ದಾನೇಶ್ವರಿ ಕೊನೆಯುಸಿರೆಳೆದಿದ್ದಾಳೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

PL 2022: ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿವರ;

Fri Mar 18 , 2022
RP ಸಂಜೀವ್ ಗೋಯೆಂಕಾ ಗುಂಪು 2016 ಮತ್ತು 2017 ರಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್‌ನಲ್ಲಿ IPL ತಂಡವನ್ನು ಹೊಂದಿತ್ತು. ತಂಡವನ್ನು MS ಧೋನಿ ಮತ್ತು ನಂತರ ಸ್ಟೀವ್ ಸ್ಮಿತ್ ನೇತೃತ್ವ ವಹಿಸಿದ್ದರು ಮತ್ತು ಅವರು 2017 ರ ಋತುವಿನ ಫೈನಲ್ ತಲುಪಿದರು. ಈಗಾಗಲೇ ಐಪಿಎಲ್ ಫ್ರಾಂಚೈಸಿಯನ್ನು ಹೊಂದಿರುವ ಅನುಭವವು ಲಕ್ನೋ ಫ್ರಾಂಚೈಸ್ ಹರಾಜಿನಲ್ಲಿ ಕಾರ್ಯನಿರ್ವಹಿಸಿದ ರೀತಿಯಲ್ಲಿ ಮತ್ತು ಅವರ ಸಹಾಯಕ ಸಿಬ್ಬಂದಿ ನೇಮಕಾತಿಗಳನ್ನು ಮಾಡಿದ ರೀತಿಯಲ್ಲಿ ತೋರಿಸಿದೆ. ಲಕ್ನೋ ಸೂಪರ್ […]

Advertisement

Wordpress Social Share Plugin powered by Ultimatelysocial