ಕನ್ನಡ ಚಿತ್ರರಂಗ ಪ್ರವೇಶಿಸಿದ ಡಾ.ರಾಜ್‌ಕುಮಾರ್ ಅವರ ಐವರು ಮೊಮ್ಮಕ್ಕಳಿವರು

ವಿನಯ್ ರಾಜ್ ಕುಮಾರ್ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ 2015ರಲ್ಲಿಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಇವರು ಚಿಕ್ಕ ವಯಸ್ಸಿನಲ್ಲೇ ಚಿತ್ರರಂಗದಲ್ಲಿ ಕಾಣಿಸಿಕೊಂಡವರು.ಒಡ ಹುಟ್ಟಿದವರು, ಆಕಸ್ಮಿಕ, ಅನುರಾಗದ ಅಲೆಗಳು ಚಿತ್ರಗಳಲ್ಲಿ ಬಾಲನಟರಾಗಿ ಕಾಣಿಸಿಕೊಂಡಿದ್ದರು. ವಿನಯ್ ಅವರು ಸಿದ್ದಾರ್ಥ್, ರನ್ ಆಂಟನಿ, ಆರ್ ದಿ ಕಿಂಗ್ ಹಾಗೂ 10 ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಡಾ.ರಾಜ್ ಕುಮಾರ್ ಮೊಮ್ಮಕ್ಕಳ ಪೈಕಿ ವಿನಯ್ ಮೊದಲನೆಯವರು.ಧನ್ಯಾ ರಾಮಕುಮಾರ್ಧನ್ಯಾ ರಾಮ್‌ಕುಮಾರ್ ‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. 2021ರಲ್ಲಿ ಬಿಡುಗಡೆಯಾದ ಈ ಸಿನಿಮಾ ಸ್ವಲ್ಪಮಟ್ಟಿಗೆ ಯಶಸ್ಸನ್ನು ಗಳಿಸಿತು. ಧನ್ಯಾ ನಟ ರಾಮ್ ಕುಮಾರ್ ಹಾಗೂ ಪೂರ್ಣಿಮಾ ಅವರ ಪುತ್ರಿ. ಸದ್ಯ ಕಾಲಾ ಪತ್ಥರ್ ಸಿನಿಮಾದಲ್ಲಿ ಧನ್ಯಾ ನಟಿಸುತ್ತಿದ್ದಾರೆ.ಧೀರೇನ್ ರಾಮ್ ಕುಮಾರ್ಡಾ.ರಾಜ್‌ಕುಮಾರ್ ಅವರ ಮುದ್ದಿನ ಪುತ್ರಿ ಪೂರ್ಣಿಮಾರವರ ಪುತ್ರನಾದ ಧೀರೇನ್ ರಾಮ್‌ಕುಮಾರ್ 2022ರಲ್ಲಿಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಇವರ ಚೊಚ್ಚಲ ಚಿತ್ರ ಸಾಹಸ, ಆಕ್ಷನ್ ರೋಮ್ಯಾಂಟಿಕ್ ಡ್ರಾಮಾ ಚಿತ್ರವನ್ನು ಜಯಣ್ಣ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿತ್ತು. ಈ ಸಿನಿಮಾ ಅಷ್ಟೇನು ಯಶಸ್ಸು ಗಳಿಸಲಿಲ್ಲ.ಯುವ ರಾಜಕುಮಾರ್ರಾಘವೇಂದ್ರ ರಾಜ್‌ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್‌ಕುಮಾರ್ ಕೂಡ ಚಿತ್ರರಂಗ ಪ್ರವೇಶಿಸಿದ್ದಾರೆ. ಇವರು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಹಾಗೂ ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಂತೋಷ್ ಆನಂದ್ ರಾಮ್ ಈ ಸಿನಿಮಾ ಕಥೆಯನ್ನು ಅಪ್ಪು ಅವರಿಗಾಗಿ ರೆಡಿ ಮಾಡಿದ್ದರು. ಆದರೆ, ಅವರ ಅಕಾಲಿಕ ನಿಧನದಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಈ ಸಿನಿಮಾದಲ್ಲಿ ಯುವ ರಾಜ್ ಕುಮಾರ್ ನಟಿಸುತ್ತಿದ್ದು, ಭಾರೀ ನಿರೀಕ್ಷೆಯಿದೆ. ಯುವ ರಾಜ್‌ಕುಮಾರ್ ಡಾ.ರಾಜ್‌ಕುಮಾರ್ ಅವರ ಹೆಸರಿನಲ್ಲಿ ನಾಗರಿಕಸೇವಾ ಪರೀಕ್ಷಾ ತರಬೇತಿ ಕೇಂದ್ರವನ್ನು ಮುನ್ನೆಡುಸುತ್ತಿದ್ದಾರೆ. 2016ರಲ್ಲಿ ತೆರೆಕಂಡ ವಿನಯ್ರಾಜ್‌ಕುಮಾರ್ ಅಭಿನಯದ `ರನ್ ಆಂಟನಿ’ ಚಿತ್ರವನ್ನು ನಿರ್ಮಿಸಿದ್ದಾರೆ.ಷಣ್ಮುಖ ಗೋವಿಂದರಾಜ್ಈ ನಾಲ್ವರ ಜೊತೆಗೆ ಡಾ.ರಾಜ್‌ಕುಮಾರ್ ಅವರ ಮಗಳು ಲಕ್ಷ್ಮಿ ಹಾಗೂ ಅಳಿಯ ಗೋವಿಂದರಾಜು ಪುತ್ರ ಷಣ್ಮುಖ ಗೋವಿಂದರಾಜ್ ಮೊದಲ ಸಿನಿಮಾ ಸೆಟ್ಟೇರಿದೆ. ಈಗಾಗಲೇ ಸಿನಿಮಾದ ಕೆಲವು ಭಾಗದ ಚಿತ್ರೀಕರಣ ಕೂಡ ಮುಗಿದಿದೆ. ಸದ್ದಿಲ್ಲದೆ ಷಣ್ಮುಖ ಗೋವಿಂದರಾಜು ಸಿನಿಮಾದ ಕಥೆಯನ್ನು ಕೇಳಿ, ಮನೆಯವರಿಗೂ ಒಪ್ಪಿಸಿ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಬಗ್ಗೆ ಇದೇ ಮೊದಲ ಬಾರಿಗೆ ಎ2 ಮೀಡಿಯಾ ಯೂಟ್ಯೂಬ್ ಚಾನೆಲ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ಷಣ್ಮುಖ ಗೋವಿಂದರಾಜ್ ಸಿನಿಮಾಗೆ ‘ನಿಂಬಿಯಾ ಬನಾದ ಮ್ಯಾಗ’ ಎಂದು ಹೆಸರಿಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಆನಂದಿ ಗೋಪಾಲ್ ಜೋಶಿ ಭಾರತೀಯ ವೈದ್ಯೆ.

Sun Feb 26 , 2023
ಆನಂದಿಬಾಯಿ ಜೋಶಿ, ಮಹಿಳೆಯರು ಮನೆಯಿಂದ ಹೊರ ಹೋಗಬಾರದೆಂಬ ಸ್ಥಿತಿಯಲ್ಲಿದ್ದ ಕಾಲದಲ್ಲಿ ವಿದೇಶಕ್ಕೆ ತೆರಳಿ ಅಧ್ಯಯನ ಮಾಡಿ ಭಾರತದ ಮೊಟ್ಟ ಮೊದಲ ಅಲೋಪಥಿ ವೈದ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ನಲ್ಲಿ 1865ರ ಮಾರ್ಚ್ 31ರಂದು ಆನಂದಿ ಜನಿಸಿದರು. ಇವರ ಹುಟ್ಟು ಹೆಸರು ಯಮುನಾ. ಈಕೆಯ ಪೋಷಕರು ಕಲ್ಯಾಣ್‍ನಲ್ಲಿ ಭೂಮಾಲೀಕರಾಗಿದ್ದರು. ಆದರೆ ಆರ್ಥಿಕವಾಗಿ ನಷ್ಟಕ್ಕೆ ಗುರಿಯಾಗಿದ್ದರು. ಯಮುನಾ(ಆನಂದಿ) 9ನೇ ವಯಸ್ಸಿಗೆ ಗೋಪಾಲ್ ರಾವ್ ಜೋಶಿ ಜತೆ ಹಸೆಮಣೆ […]

Advertisement

Wordpress Social Share Plugin powered by Ultimatelysocial