ಐದು ವರ್ಷದ ಪ್ರೀತಿ ಬೆಂಕಿಯಲ್ಲಿ ದಹನ: ಪ್ರಿಯಕರನನ್ನು ಹುಡುಕಿಕೊಂಡು ಬಂದ ಯುವತಿ ದುರಂತ ಸಾವು

ಬೆಂಗಳೂರು: ಐದು ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿಗೆ ಬೆಂಕಿ ಇಟ್ಟು ಹತ್ಯೆ ಮಾಡಿರುವ ಆರೋಪ ಪ್ರಿಯಕರನ ವಿರುದ್ಧ ಕೇಳಿಬಂದಿದೆ. ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ.ದಾನೇಶ್ವರಿ ಮೃತ ಯುವತಿ. ಪ್ರಿಯಕರ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವಿಜಯಪುರದ ತಾಳೀಕೋಟೆ ಮೂಲದ ದಾನೇಶ್ವರಿ ಹಾಗೂ ಶಿವಕುಮಾರ್ 2018ರಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ವಿಜಯಪುರದ ಬಿಎಲ್​ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ವಿದ್ಯಾಭ್ಯಾಸದ ಬಳಿಕ ಶಿವಕುಮಾರ್​, ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರದ ಸ್ಟೇನ್​ ಲೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಇತ್ತೀಚೆಗೆ ದಾನೇಶ್ವರಿಯನ್ನು ಶಿವಕುಮಾರ್​ ಕಡೆಗಣಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಮದುವೆ ವಿಚಾರವಾಗಿಯೂ ಇಬ್ಬರ ನಡುವೆ ಗಲಾಟೆಯಾಗಿತ್ತು ಎಂದು ಹೇಳಲಾಗಿದೆ. ಕರೆ ಮಾಡಿದರೂ ಸ್ವೀಕರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಶಿವಕುಮಾರ್ ಕೆಲಸ ಮಾಡ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದಿದ್ದಳು. ಈ ವೇಳೆ ಮದುವೆಯ ವಿಚಾರದಲ್ಲಿ ಕಂಪನಿ ಮುಂದೆಯೇ ಇಬ್ಬರ ನಡುವೆ ಜಗಳವಾಗಿತ್ತು ಎಂದು ತಿಳಿದುಬಂದಿದೆ.

ಬಾಟಲ್​ನಲ್ಲಿ ಪೆಟ್ರೋಲ್ ತಂದು ದಾನೇಶ್ವರಿ ಮೇಲೆ ಎರಚಿ, ಬೆಂಕಿ ಹಚ್ಚಿರುವ ಆರೋಪ ಶಿವಕುಮಾರ್​ ವಿರುದ್ಧ ಕೇಳಿಬಂದಿದೆ. ಬೆಂಕಿ ಹಚ್ಚಿದ ಬಳಿಕ ದಾನೇಶ್ವರಿಯನ್ನು ತಾನೇ ಖಾಸಗಿ ಆಸ್ಪತ್ರೆಗೆ ದಾಖಲಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ದಾನೇಶ್ವರಿ ಮೃತಪಟ್ಟಿದ್ದಾಳೆಂದು ತಿಳಿದುಬಂದಿದೆ.

ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್​ 307 ಮತ್ತು ಎಸ್​ಸಿ-ಎಸ್​ಟಿ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಎರಡು ದಿನದ ಹಿಂದೆ ಈ ಹೀನ ಕೃತ್ಯ ನಡೆದಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ದಾನೇಶ್ವರಿ ಕೊನೆಯುಸಿರೆಳೆದಿದ್ದಾಳೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ ವಿಶ್ವಕಪ್: ಹರ್ಮನ್ಪ್ರೀತ್ ಅವರನ್ನು ಮಧ್ಯದಲ್ಲಿ ಗರಿಷ್ಠ ಸಮಯವನ್ನು ಪಡೆಯಲು ಬೆಂಬಲಿಸಿದರು;

Fri Mar 18 , 2022
ಮಾಜಿ ನಾಯಕಿ ಡಯಾನಾ ಎಡುಲ್ಜಿ ಐಸಿಸಿ ಮಹಿಳಾ ವಿಶ್ವಕಪ್ 2022 ರಲ್ಲಿ ಭಾರತದ ಮುಂಬರುವ ಪಂದ್ಯಗಳಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಇನ್-ಫಾರ್ಮ್ ಬ್ಯಾಟರ್‌ಗಳಾದ ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಮೃತಿ ಮಂಧಾನ ಅವರು ಮಧ್ಯದಲ್ಲಿ ಗರಿಷ್ಠ ಸಮಯವನ್ನು ಪಡೆಯಬೇಕೆಂದು ಬಯಸುತ್ತಾರೆ. ಕಳೆದ ತಿಂಗಳು ಹರ್ಮನ್‌ಪ್ರೀತ್ ಅವರನ್ನು ಪ್ಲೇಯಿಂಗ್ ಹನ್ನೊಂದರಿಂದ ಹೊರಗಿಡುವಂತೆ ಕರೆ ನೀಡಿದ್ದ ಎಡುಲ್ಜಿ, ಇದುವರೆಗೆ ಐಸಿಸಿ ಈವೆಂಟ್‌ನಲ್ಲಿ ನಾಲ್ಕಕ್ಕೆ ನೂರು ಮತ್ತು 50 ಬ್ಯಾಟಿಂಗ್‌ಗಳನ್ನು ಬಾರಿಸಿದ ಹಿರಿಯ ಬ್ಯಾಟರ್‌ನಿಂದ […]

Advertisement

Wordpress Social Share Plugin powered by Ultimatelysocial