ಕರ್ನಾಟದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಕುರಿತಾಗಿ ನೆರೆಯ ಪಾಕಿಸ್ತಾನ ಮತ್ತೊಮ್ಮೆ ಕ್ಯಾತೆ ತೆಗೆದಿದೆ!

ಇಸ್ಲಾಮಾಬಾದ್‌ ಫೆಬ್ರವರಿ 11: ಕರ್ನಾಟಕದ ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.ಭಾರತ ದೇಶದ ವಿಷಯಗಳಲ್ಲಿ ಮೂಗು ತೂರಿಸುವುದನ್ನು ಮುಂದುವರೆಸಿರುವ ಪಾಕಿಸ್ತಾನ, ಹಿಜಾಬ್ ವಿವಾದವನ್ನು ಧಾರ್ಮಿಕ ಅಸಹಿಷ್ಣುತೆ, ಮುಸ್ಲಿಮರ ಮೇಲಿನ ದಬ್ಬಾಳಿಕೆ, ತಾರತಮ್ಯ ಎಂದು ಕರೆದಿದೆ.ಇದಕ್ಕೂ ಮೊದಲು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಹಿಜಾಬ್ ಧರಿಸುವುದು ಮುಸ್ಲಿಂ ಬಾಲಕಿಯರ ಹಕ್ಕು, ಅದನ್ನು ತಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಭಾರತದ ರಾಯಭಾರಿಯನ್ನು ಕರೆಸಿಕೊಂಡು ಪಾಕಿಸ್ತಾನ ಅಸಮಾಧಾನ ಹೊರಹಾಕಿದೆ.ಕರ್ನಾಟಕದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವಿದೇಶಾಂಗ ಕಚೇರಿಯ ಎಲ್ಲಾ ಆರೋಪಗಳನ್ನು ಭಾರತದ ರಾಯಭಾರ ಕಚೇರಿ ತಳ್ಳಿಹಾಕಿದೆ. ಭಾರತೀಯ ಅಧಿಕಾರಿಗಳು ಪಾಕಿಸ್ತಾನದ ಹೇಳಿಕೆಗಳನ್ನು “ಆಧಾರ ರಹಿತ’ ಮತ್ತು “ಭಾರತವು ಜಾತ್ಯತೀತ ದೇಶ’ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕರ್ನಾಟದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಕುರಿತಾಗಿ ನೆರೆಯ ಪಾಕಿಸ್ತಾನ ಮತ್ತೊಮ್ಮೆ ಕ್ಯಾತೆ ತೆಗೆದಿದೆ. ತನ್ನ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಉಪ ಅಧಿಕಾರಿಗಳನ್ನು ಕರೆಸಿಕೊಂಡ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಪ್ರಶ್ನಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ಹೊರಡಿಸಿದ ಹೇಳಿಕೆಯಲ್ಲಿ, “ಕರ್ನಾಟಕದಲ್ಲಿ ಆರ್‌ಎಸ್‌ಎಸ್- ಬಿಜೆಪಿ ಸಂಯೋಜನೆಯು ಮುನ್ನಡೆಸುತ್ತಿರುವ ಹಿಜಾಬ್ ವಿರೋಧಿ ಅಭಿಯಾನದ ಬಗ್ಗೆ ಪಾಕಿಸ್ತಾನದ ತೀವ್ರ ಕಳವಳವನ್ನು ಭಾರತ ಸರ್ಕಾರಕ್ಕೆ ತಿಳಿಸಲು ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ. ಮುಸ್ಲಿಂ ಜನರನ್ನು ಹೊರಗಿಡುವ ಮತ್ತು ಮುಸ್ಲಿಂ ಮಹಿಳೆಯರನ್ನು ಅಮಾನವೀಯಗೊಳಿಸುವ ಮತ್ತು ರಾಕ್ಷಸೀಕರಿಸುವ ಬಹುಸಂಖ್ಯಾತ ಅಜೆಂಡಾದ ಗುರಿಯಾಗಿದೆ ಎಂದು ಹೇಳಿದೆ.ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವ ಅಪರಾಧಿಗಳನ್ನು ಭಾರತ ಸರ್ಕಾರವು ವಿಚಾರಣೆಗೆ ಒಳಪಡಿಸಬೇಕು ಮತ್ತು ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

NIGERIA:ನೈಜೀರಿಯಾ ಇಸ್ಲಾಮಿಕ್ ಪೊಲೀಸರು ಸುಮಾರು 4 ಮಿಲಿಯನ್ ಬಿಯರ್ಗಳನ್ನು ನಾಶಪಡಿಸಿದರು;

Fri Feb 11 , 2022
ಉತ್ತರ ನೈಜೀರಿಯಾದ ನಗರವಾದ ಕ್ಯಾನೋದಲ್ಲಿ ಧಾರ್ಮಿಕ ಪೊಲೀಸರು ಸುಮಾರು ನಾಲ್ಕು ಮಿಲಿಯನ್ ಬಿಯರ್ ಬಾಟಲಿಗಳನ್ನು ನಾಶಪಡಿಸಿದ್ದಾರೆ, ಪ್ರಧಾನವಾಗಿ ಮುಸ್ಲಿಂ ಪ್ರದೇಶದಲ್ಲಿ ಮದ್ಯದ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಷರಿಯಾ ಪೊಲೀಸರು ಹಿಸ್ಬಾಹ್ ಎಂದು ಕರೆಯುತ್ತಾರೆ, ಆಗಾಗ್ಗೆ ಮದ್ಯವನ್ನು ನಾಶಮಾಡುತ್ತಾರೆ ಮತ್ತು ಮಾದಕವಸ್ತುಗಳನ್ನು ವಶಪಡಿಸಿಕೊಳ್ಳುತ್ತಾರೆ, ಆದರೆ ಇತ್ತೀಚೆಗೆ ತೀವ್ರಗೊಂಡ ದಮನದಲ್ಲಿ ಬೃಹತ್ ಬಿಯರ್ ಸಾಗಣೆಯು ದೊಡ್ಡದಾಗಿದೆ. ನೂರಾರು ಹಿಸ್ಬಾ ಬುಧವಾರ ತುಡುನ್ ಕಾಲೇಬಾವಾ ಗ್ರಾಮದ ತೆರೆದ ಜಾಗದಲ್ಲಿ 3,873,163 ಬಾಟಲಿಗಳಲ್ಲಿ ಬಿಯರ್ […]

Advertisement

Wordpress Social Share Plugin powered by Ultimatelysocial