ಹುಬ್ಬಳ್ಳಿ: ‘ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸಯತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಯುತ್ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಶನಿವಾರ ನಗರದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಚಿವ ಈಶ್ವರಪ್ಪ ಮತ್ತು ಶಾಸಕ ಬಸನಗೌಡ ಯತ್ನಾಳ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ಈಶ್ವರಪ್ಪ ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.

ಮುಖಂಡ ರಜತ ಉಳ್ಳಾಗಡ್ಡಿಮಠ ಮಾತನಾಡಿ, ‘ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಎಂದಿರುವ ಈಶ್ವರಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕು. ಸಚಿವರಾಗಿ ಹೀಗೆ ಮಾತನಾಡಿರುವುದು ಸರಿಯಲ್ಲ. ಅವರು ಉಗ್ರಗಾಮಿ, ದೇಶದ್ರೋಹಿಯಂತೆ ಹೇಳಿಕೆ ನೀಡುತ್ತಿದ್ದಾರೆ. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು’ ಎಂದು ಒತ್ತಾಯಿಸಿದರು.

ಕಾರ್ಯಕರ್ತರಾದ ಷಹಜಮಾನ್ ಮುಜಾಯಿದ್, ಶಿವ ಬೆಂಡಿಗೇರಿ, ಆರಿಫ್ ಭದ್ರಾಪುರ, ಸಂದಿಲ್ ಕುಮಾರ, ಇಕ್ಬಾಲ್ ನವಲೂರು, ಸುನಿಲ್ ಮರಾಠೆ, ಅರುಣ ಹಳ್ಳಿಕೇರಿ, ಸಾದಿಕ್ ಎಕ್ಕುಂಡಿ, ಆಕಾಶ ಕೋಣೇರಿ, ಸಂತೋಷ ನಾಯಕ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

9ನೇ ತರಗತಿ ವಿದ್ಯಾರ್ಥಿನಿಯನ್ನ ನಾಲ್ಕು ಜನ ದುರ್ಷ್ಕಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ!

Sat Feb 19 , 2022
  9ನೇ ತರಗತಿ ವಿದ್ಯಾರ್ಥಿನಿಯನ್ನ ನಾಲ್ಕು ಜನ ದುರ್ಷ್ಕಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ತಾಲ್ಲೂಕಿನಲ್ಲಿ ನಡೆದಿದೆ.ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಆನಂದ ಕುಮಾರ್ (25), ಕಾಂತರಾಜ್ (23), ಪ್ರವೀಣ್ (21), ವೇಣು (19) ಬಂಧಿತ ಆರೋಪಿಗಳು.9 ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಶುಕ್ರವಾರ ಸಂಜೆ ಅಪಹರಿಸಿದ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ನಾಲ್ವರ ವಿರುದ್ಧ […]

Advertisement

Wordpress Social Share Plugin powered by Ultimatelysocial