ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ. ಮುಖ್ಯ ಅಡುಗೆಯವರಿಗೆ ಮಾಸಿಕ ಸಂಭಾವನೆ 3700ರೂ.!

ಬೆಂಗಳೂರು,ಏ.14- ಅಕ್ಷರ ದಾಸೋಹದ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ಮಾಸಿಕ ಗೌರವ ಸಂಭಾವನೆಯನ್ನು ಒಂದು ಸಾವಿರ ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಸಂಭಾವನೆ ಹೆಚ್ಚಳ ಮಾಡಿದ್ದು, ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ. ಮುಖ್ಯ ಅಡುಗೆಯವರಿಗೆ ಮಾಸಿಕ ಸಂಭಾವನೆ 3700ರೂ.ಗೆ ಏರಿಕೆಯಾದರೆ, ಸಹಾಯ ಅಡುಗೆಯವರ ಮಾಸಿಕ ಸಂಭಾವನೆ 3600ರೂ.ಗೆ ಹೆಚ್ಚಳ ಮಾಡಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕಳೆದ 2018ರ ಜನವರಿಯಿಂದ ಜಾರಿಗೆ ಬರುವಂತೆ ತಲಾ 500 ರೂ. ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿತ್ತು. ರಾಜ್ಯದಲ್ಲಿ 47,250 ಮುಖ್ಯ ಅಡುಗೆಯವರು, 71,336 ಸಹಾಯಕ ಅಡುಗೆಯವರಿದ್ದಾರೆ. ಹೆಚ್ಚಳ ಮಾಡಿರುವ ಮಾಸಿಕ ಸಂಭಾವನೆಯಿಂದಾಗಿ 118.58 ಕೋಟಿ ರೂ. ವೆಚ್ಚ ಭರಿಸಬೇಕಾಗಿದೆ.

ಉಪಹಾರ ಯೋಜನೆಯ ಆಹಾರ ಸೂಚನಾ ಪಟ್ಟಿಯಂತೆ ಪೌಷ್ಠಿಕ ಆಹಾರ ತಯಾರಿಸುವ ವಿ ವಿಧಾನಗಳನ್ನು ಅಡುಗೆ ಸಿಬ್ಬಂದಿಗೆ ಕಡ್ಡಾಯವಾಗಿ ಕಲಿಸಿ ಮಕ್ಕಳ ಪೌಷ್ಠಿಕತೆ, ಅಭಿವೃದ್ಧಿಗೊಳಿಸಲು ಕ್ರಮ ವಹಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.!

Thu Apr 14 , 2022
ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ. ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ […]

Advertisement

Wordpress Social Share Plugin powered by Ultimatelysocial