ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಬಿಎಸ್ ವೈ ಅಸ್ತು

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ  ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮವನ್ನು ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯ ಹಿನ್ನಲೆಯಲ್ಲಿ ಸ್ಥಾಪನೆ ಮಾಡಿದ್ದರು. ಈ ಬಳಿಕ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು. ಇದೀಗ ಇದಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ  ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಲಿಂಗಾಯತ ಅಭಿವೃದ್ಧಿ ನಿಗಮದ ಜೊತೆಗೆ, ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಕಲ್ಪಿಸಿಕೊಂಡುವಂತೆ ಮನವಿ ಮಾಡಿದ್ದರು. ವೀರಶೈವ ಸಮುದಾಯದ ಮುಖಂಡರು, ಲಿಂಗಾಯುತ ಸಮುದಾಯದ ಮುಖಂಡರು, ಸ್ವಾಮೀಜಿಗಳು ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ನಂತ್ರ, ಲಿಂಗಾಯತ, ವೀರಶೈವ ಸಮುಂದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ ಮಾಡಲಾಗಿತ್ತು. ಇದಕ್ಕೆ ಪ್ರತಿ ಸ್ಪಂದಿಸಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶಿಸಿದ್ದಾರೆ. ಈ ಮೂಲಕ ಕೊನೆಗೂ ಐತಿಹಾಸಿಕ ನಿಲುವನ್ನು ತಾಳಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಆದೇಶಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ - ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

Tue Nov 17 , 2020
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು  ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್   ಬಂಧಿಸಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಆರೋಗ್ಯ ಸರಿ ಇರಲಿಲ್ಲ. ಬಿಜೆಪಿ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನನ್ನು ಟಾರ್ಗೆಟ್ ಮಾಡಿದ್ರು, ಈಗ ಸಂಪತ್ ರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ… ಅಖಂಡ […]

Advertisement

Wordpress Social Share Plugin powered by Ultimatelysocial