ಚಾಮರಾಜನಗರದ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇವತ್ತು ಬೆಳಗ್ಗೆ ವಿಧಿವಶರಾಗಿದ್ದಾರೆ.

ಚಾಮರಾಜನಗರದ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇವತ್ತು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರ ಅಗಲಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಬೊಮ್ಮಾಯಿ , ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ.

ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಅಂತಾ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ದುಃಖ ವ್ಯಕ್ತಪಡಿಸಿದ್ದಾರೆ. ಧ್ರುವನಾರಾಯಣ್ ಹಠಾತ್ ನಿಧನರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಒಬ್ಬ ಸಕ್ರಿಯ ರಾಜಕಾರಣಿಯನ್ನ ನಾಡು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಧ್ರುವನಾರಾಯಣ್​ಗೆ ರಕ್ತ ವಾಂತಿ ಆಯಿತು, ಎಷ್ಟೇ ಪ್ರಯತ್ನ ಪಟ್ಟರೂ..' ವೈದ್ಯರು ನೀಡಿದ ಮಾಹಿತಿ ಏನು..?

Sat Mar 11 , 2023
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇನ್ನಿಲ್ಲ. ತೀವ್ರ ರಕ್ತಸ್ರಾವ ಉಂಟಾಗಿ ಮೈಸೂರಿನ ಡಿಆರ್​ಎಂಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ವೈದ್ಯರು ಹೇಳಿದ್ದೇನು..? ಧ್ರುವನಾರಾಯಣ್​ಗೆ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆಯೇ ಮೈಸೂರಿನ DRMS ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮನೆಯಲ್ಲಿ ಧ್ರುವನಾರಾಯಣ್ ಮಂಚದಿಂದ ಕೆಳಗೆ ಬಿದ್ದು ರಕ್ತವಾಂತಿ ಮಾಡಿಕೊಂಡು ನೋವಿನಿಂದ ಬಳಲುತ್ತಿದ್ದರು ಎಂದು ವೈದ್ಯ ಡಾ.ಮಂಜುನಾಥ್ ತಿಳಿಸಿದ್ದಾರೆ. ಧ್ರುವನಾರಾಯಣ್ ರಕ್ತವಾಂತಿ ಮಾಡಿಕೊಂಡು […]

Advertisement

Wordpress Social Share Plugin powered by Ultimatelysocial