ಮಾಜಿ ಶಾಸಕ ಕಿರಣ್‌ ಕುಮಾರ್‌ ಬಿಜೆಪಿಗೆ ಗುಡ್‌ಬೈ!

ತುಮಕೂರು: ಕರ್ನಾಟಕ ವಿಧಾನಸಭಾ ಚುನಾವಣೆ  ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ.
ಬಿಜೆಪಿ ಮಾಜಿ ಶಾಸಕ, ಆರ್‌ಎಸ್‌ಎಸ್‌ ಕಟ್ಟಾಳು, ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಕಿರಣ್ ಕುಮಾರ್ ಅವರು ಬಿಜೆಪಿಗೆ ತೊರೆಯಲು ಮುಂದಾಗಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.

ಕಿರಣ್‌ ಕುಮಾರ್‌ ತಮ್ಮ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ.‌ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಈಗ ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ.

ಇನ್ನು ಬಿಜೆಪಿಯಲ್ಲಿದ್ದರೂ ಸಚಿವ ಮಾಧುಸ್ವಾಮಿ ವಿರುದ್ಧ ಕಿರಣ್ ಕುಮಾರ್‌ ತೊಡೆತಟ್ಟಿದ್ದರು. ಆಗಾಗ ಇಬ್ಬರ ನಡುವೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇದ್ದವು. ಈಗ ವೈಯಕ್ತಿಕ ಕಾರಣ ನೀಡಿರುವ ಕಿರಣ್‌, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಧಿಕಾರಕ್ಕೆ ಬಂದ ಮರುದಿನವೇ 1800 ಕೋಟಿ ರೂ. ರೈತರ ಸಾಲ ಮನ್ನಾ!

Sun Feb 19 , 2023
ಬೆಂಗಳೂರು- ಸ್ವಂತ ಶಕ್ತಿಯ ಮೇಲೆ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಮರುದಿನವೇ ಬಾಕಿ ಉಳಿದಿರುವ 1800 ಕೋಟಿ ರೂ. ರೈತರ ಸಾಲವನ್ನು ಬಡ್ಡಿಸಹಿತ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದರು. ಜೆಪಿ ಭವನದಲ್ಲಿ ನಡೆದ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವತಂತ್ರ ಸರ್ಕಾರ ರಚನೆಯಾದರೆ ಪಂಚರತ್ನ ಯೋಜನೆಗಳ ಭರವಸೆಗಳನ್ನು ಈಡೇರಿಸುತ್ತೇನೆ ಎಂದರು. ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಯಾವುದೇ ಮಹತ್ವವಿಲ್ಲ. ಬರೀ ಘೋಷಣೆಗಳನ್ನು ಮಾಡಿದ್ದಾರೆ […]

Advertisement

Wordpress Social Share Plugin powered by Ultimatelysocial