ಫ್ರಾನ್ಸ್​ಗೆ ನರೇಂದ್ರ ಮೋದಿ ಭೇಟಿ:

ನವದೆಹಲಿ: ಮೂರು ದಿನಗಳ ಯುರೋಪ್​ ಪ್ರವಾಸದ ಕೊನೆಯಲ್ಲಿ ಬುಧವಾರ ರಾತ್ರಿ ಫ್ರಾನ್ಸ್​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್​ ಮ್ಯಾಕ್ರಾನ್​ರ ಜತೆ ಜಾಗತಿಕ ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು.

ರಕ್ಷಣಾ ಸಹಕಾರ, ಬಾಹ್ಯಾಕಾಶ, ಆರ್ಥಿಕತೆ, ನಾಗರಿಕ ಪರಮಾಣು ಸೇರಿದಂತೆ ದ್ವಿಪಕ್ಷೀಯ ಒಪ್ಪಂದಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದರು.

ಈ ಕುರಿತು ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ನರೇಂದ್ರ ಮೋದಿ, ಫ್ರಾನ್ಸ್​ ಅಧ್ಯಕರ ಜತೆ ದ್ವಿಪಕ್ಷೀಯ ಹಾಗೂ ಜಾಗತಿಕ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದೇವೆ. ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾಡುವಲ್ಲಿ ಒಟ್ಟಾಗಿ ಕೆಲಸ ಮಾಡುವ ಮಾರ್ಗಗಳ ಕುರಿತು ಚರ್ಚಿಸಲಾಯಿತು. ಫ್ರಾನ್ಸ್‌ಗೆ ನನ್ನ ಭೇಟಿ ಫಲಪ್ರದವಾಗಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಅವಕಾಶ ಸಿಕ್ಕಿತು. ಆತ್ಮೀಯ ಆತಿಥ್ಯ ನೀಡಿದ ಫ್ರಾನ್ಸ್​ ಅಧ್ಯಕ್ಷರು ಮತ್ತು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.ಫ್ರೆಂಚ್ ಅಧ್ಯಕ್ಷರು ಮತ್ತು ನಿಯೋಗ ಮಟ್ಟದ ಸಭೆಯಲ್ಲಿ ಯೂಕ್ರೇನ್​ ಹಾಗೂ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಬಗ್ಗೆಯೂ ಚರ್ಚಿಸಲಾಯಿತು. ಯೂಕ್ರೇನ್​ ಮೇಲೆ ರಷ್ಯಾ ದಾಳಿ ಕುರಿತು ಅಸಮಾಧನ ಹೊರಹಾಕಿದ ಫ್ರಾನ್ಸ್​ ಅಧ್ಯಕ್ಷ, ಕಾನೂನುಬಾಹಿರ ಮತ್ತು ಅಪ್ರಚೋದಿತ ಆಕ್ರಮಣವನ್ನು ಖಂಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 16ರಂದು ನರೇಂದ್ರ ಮೋದಿ ನೇಪಾಳ ಪ್ರವಾಸ

Thu May 5 , 2022
  ನವದೆಹಲಿ, ಮೇ 04; ಯುರೋಪ್ ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ದೆಹಲಿಗೆ ವಾಪಸ್ ಆಗಲಿದ್ದಾರೆ. ಮೇ 16ರಂದು ಅವರು ನೇಪಾಳ ಪ್ರವಾಸ ಕೈಗೊಂಡಿದ್ದಾರೆ. ಗೌತಮ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇಪಾಳ ಪ್ರವಾಸಕ್ಕೆ ತೆರಳುತ್ತಿದ್ದಾರೆ. ನೇಪಾಳದ ಪ್ರಧಾನ ಮಂತ್ರಿಗಳ ಕಚೇರಿ ಮೋದಿ ಭೇಟಿ ಬಗ್ಗೆ ಬುಧವಾರ ಮಾಹಿತಿ ನೀಡಿದೆ. 2022ರಲ್ಲಿ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ […]

Advertisement

Wordpress Social Share Plugin powered by Ultimatelysocial