ಜಿ. ಟಿ. ದೇವೇಗೌಡರ ಮೊಮ್ಮಗಳು ವಿಧಿವಶ!

ಮೈಸೂರು, ಮೇ 15; ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ. ಟಿ. ದೇವೇಗೌಡಮೊಮ್ಮಗಳು  ಸಾವನ್ನಪ್ಪಿದ್ದಾಳೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಜಿ. ಟಿ. ದೇವೇಗೌಡರ ಪುತ್ರ ಜಿ. ಡಿ. ಹರೀಶ್ ಗೌಡ ಪುತ್ರಿ ಗೌರಿ (3) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಶನಿವಾರ ರಾತ್ರಿ ಸಾವನ್ನಪ್ಪಿದ್ದಾಳೆ. ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಗು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು.

ಗೌರಿ ನಿಧನಕ್ಕೆ ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು, ‘ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ’ ಎಂದು ಹೇಳಿದ್ದಾರೆ.

‘ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಸಂತಾಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಮಾಜಿ ಸಚಿವರು, ಆತ್ಮೀಯರು ಆದ ಜಿ. ಟಿ. ದೇವೇಗೌಡರ ಮೊಮ್ಮಗಳು ಗೌರಿಯ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ. ಟಿ . ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಶಾಲಾರಂಭ: ಬಿಸಿಯೂಟ ನೌಕರರಿಗಿಲ್ಲ ಈ ತಿಂಗಳ ವೇತನ!

Sun May 15 , 2022
  ಕುಂದಾಪುರ: ರಾಜ್ಯಾದ್ಯಂತ ಮೇ 16ರಿಂದ ಶಾಲೆಗಳು ಆರಂಭಗೊಳ್ಳಲಿವೆ. ಮೊದಲ ದಿನದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಇರಲಿದೆ. ಆದರೆ ಸರಕಾರದ ಆದೇಶದ ಪ್ರಕಾರ ಬಿಸಿಯೂಟ ನೌಕರರಿಗೆ ಮಾತ್ರ ಈ ತಿಂಗಳಿನ ವೇತನ ಸಿಗುವುದಿಲ್ಲ. ಸರಕಾರವು ಬಿಸಿಯೂಟ ತಯಾರಕರು ಮತ್ತು ಸಹಾಯಕ ಸಿಬಂದಿಗೆ ವರ್ಷದ 10 ತಿಂಗಳು ಮಾತ್ರ ಗೌರವಧನ ನೀಡುತ್ತಿದ್ದು, ಎಪ್ರಿಲ್‌-ಮೇಯಲ್ಲಿ ಕೊಡುವುದಿಲ್ಲ. ಈ ಬಾರಿ ಮೇ 16ರಿಂದ ಶಾಲೆಗಳು ಆರಂಭಗೊಳ್ಳುತ್ತಿವೆ. ಬಿಸಿಯೂಟ ಆರಂಭಕ್ಕೆ ಬೇಕಾದ ಎಲ್ಲ ಅಗತ್ಯ ಸಾಮಗ್ರಿಗಳನ್ನು ಈಗಾಗಲೇ […]

Advertisement

Wordpress Social Share Plugin powered by Ultimatelysocial