ಜಿವಿ ಅಯ್ಯರ್ ಸ್ಟುಡಿಯೋದಲ್ಲಿ ಕುಂಬಳಕಾಯಿ ಒಡೆದ ಬಿಸಿ ಪಾಟೀಲ್‌

ನಟ ಹಾಗೂ ಶಾಸಕ ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಮುಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ‌ಗರಡಿಮನೆ ಸೆಟ್ ಹಾಕಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸುವುದರೊಂದಿಗೆ ‘ಗರಡಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು.ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣದ ನಂತರ ಇಂದು ‘ಗರಡಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ‘ಗರಡಿ’ ಮನೆ ಸೆಟ್ ನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಹಂತದ ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ. ‘ಗರಡಿ’ ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಯೋಗರಾಜ್ ಭಟ್.
ಇಂದು ‘ಗರಡಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದ ಬಿ.ಸಿ.ಪಾಟೀಲ್ ಅವರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.
ನಾನು ‘ಪೈಲ್ವಾನ್’ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕ ಯಶಸ್ ಸೂರ್ಯ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಅಟ್ಲಿ' ಸಿನಿಮಾ ತಂಡ ಸೇರಿಕೊಂಡ 'ಫ್ಯಾಮಿಲಿ ಸ್ಟಾರ್' ಅಭಿಜಿತ್

Mon Jan 9 , 2023
  ಕಳೆದ ಮೂರು ದಶಕಗಳಿಂದ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರುವ, ಫ್ಯಾಮಿಲಿ ಸ್ಟಾರ್ ಎಂದೇ ಖ್ಯಾತರಾಗಿರುವ ಅಭಿಜಿತ್  ಅಟ್ಲಿ’ ಚಿತ್ರದ  ತಮ್ಮ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.’ಅಟ್ಲಿ’ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ಚೆನ್ನಾಗಿದೆ. ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ತೊಂಭತ್ತರ ದಶಕದಲ್ಲಿ ನನ್ನ ಹಾಗೂ ಶೃತಿ ಅವರ ಜೋಡಿಯಲ್ಲಿ ಬಿಡುಗಡೆಯಾಗಿದ್ದ ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿದೆ. ಈಗ ಹಲವು ವರ್ಷಗಳ ನಂತರ ನಾನು […]

Advertisement

Wordpress Social Share Plugin powered by Ultimatelysocial