ಜಿಲ್ಲಾಡಳಿತದಿಂದ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ.

ಜಿಲ್ಲಾಡಳಿತದ ವತಿಯಿಂದ ಇದೇ ಜನವರಿ 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಪ್ರತಿವರ್ಷದಂತೆ ಈ ವರ್ಷವೂ ಗಣರಾಜ್ಯೊತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜ್‍ಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ನಂತರ ಬೆಳಿಗ್ಗೆ 9-00 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಧ್ವಜಾರೋಹಣ ತರುವಾಯ, ಧ್ವಜ ವಂದನೆ, ಕವಾಯತು, ಪಥ ಸಂಚಲನ, ಗಣರಾಜ್ಯೋತ್ಸವ ಸಂದೇಶ, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾ ಪಟುಗಳಿಗೆ ಸನ್ಮಾನ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದ್ದು, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಗಣರಾಜ್ಯೋತ್ಸವದ ಅಂಗವಾಗಿ ನಗರದ ಎಲ್ಲ ವೃತ್ತಗಳಿಗೆ ಐತಿಹಾಸಿಕ ಕಟ್ಟಡಗಳಾದ ಗೋಲಗುಂಬಜ್, ಬಾರಾಕಮಾನ, ಇಬ್ರಾಹಿಂರೋಜಾ ಸೇರಿದಂತೆ ಇತರೆ ಕಟ್ಟಡಗಳಿಗೆ ದೀಪಾಲಂಕಾರ ಮಾಡುವುದು, ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದ ಆವರಣ ಒಳಗೆ ಮತ್ತು ಹೊರಗೆ ಮುಂಚಿತವಾಗಿ ಸ್ವಚ್ಛತೆ ಕೈಗೊಳ್ಳುವುದು, ಜಿಲ್ಲಾ ಕ್ರೀಡಾಂಗಣದ ಅಲಂಕಾರ,ಆಸನ ವ್ಯವಸ್ಥೆ, ಧ್ವನಿ ವರ್ಧಕ ವ್ಯವಸ್ಥೆ ಹಾಗೂ ವಿಜಯಪುರ ನಗರದ ವಿವಿಧ ಐತಿಹಾಸಿಕ ಸ್ಮಾರಕಗಳು, ರಸ್ತೆಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೋಲಿಸ್, ಹೋಮಗಾರ್ಡ, ಸೈನಿಕ ಶಾಲೆ ವಿದ್ಯಾರ್ಥಿಗಳು, ಎನ್‍ಸಿಸಿ, ಅಗ್ನಿಶಾಮಕ, ಅರಣ್ಯ ಇಲಾಖೆ, ಸ್ಕೌಟ್ & ಗೈಡ್ಡ್ ತಂಡದವರಿಂದ ಜನವರಿ 23 ರಿಂದ 25ರವರೆಗೆ ಮೂರು ದಿನಗಳ ಕಾಲ ಪಥಸಂಚಲನ (ರಿಹರ್ಸಲ್) ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸಂವಿಧಾನದ ಪ್ರಸ್ತಾವನೆ ಓದಿ ಹೇಳಿದ ನಂತರ ಸಂದೇಶ ಓದುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಭಾರತ ಸಂವಿಧಾನದ ಪ್ರಸ್ತಾವನೆ ಫಲಕಗಳನ್ನು ನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲು ನಿರ್ಧರಿಸಲಾಯಿತು.
ಅಂದು ಸಂಜೆ 5 ಗಂಟೆಯಿಂದ 6-30 ವರೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದಲ್ಲಿ ದೇಶಕ್ತಿ ಗೀತೆಗಳು ಹಾಗೂ ಸಾಂಸ್ಕøತಿಕ ಮೆರಗನನ್ನು ನೀಡುವಂತಹ ಕಾರ್ಯಕ್ರಮಗಳನ್ನುಆಯೋಜಿಸಿ ವಿಭಿನ್ನವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಯಿತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಾ.ಪಂ,ಜಿ.ಪಂ ಮಹಿಳೆಯರಿಗೆ ಯಶವಂತರಾಯಗೌಡ ಪಾಟೀಲ.

Tue Jan 17 , 2023
ಸಾಮಾನ್ಯ ಮಹಿಳೆ ರಾಷ್ಟ್ರ ಮಟ್ಟದ ನಾಯಕಿಯಾಗಲು ಅವಕಾಶ ನೀಡಿದ ಏಕೈಕ ಪಕ್ಷ ಕಾಂಗ್ರೆಸ್.40 ವರ್ಷ ರಾಜಕಾರಣದಲ್ಲಿ ನಾನು ಎಂದಿಗೂ ಮಹಿಳೆಯರ ಸಂಘಟನೆಗೆ ಹೆಚ್ಚು ಒತ್ತು ನೀಡಿರಲ್ಲಿಲ್ಲ ಶ್ರೀಮತಿ ನಿರ್ಮಲಾ ತಳಕೇರಿ ಹಾಗೂ ವಿಧ್ಯಾರಾಣಿ ತುಂಗಳ ಇವರ ಪರಿಶ್ರಮಕ್ಕೆ ಸಂಘಟನಾ ಶಕ್ತಿಯ ಕಾರ್ಯ ಶ್ಲ್ಯಾಗನೀಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಹಾಗೂ ನಾ ನಾಯಕಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ […]

Advertisement

Wordpress Social Share Plugin powered by Ultimatelysocial