ಬಸವರಾಜ ಬೊಮ್ಮಾಯಿ ದೆಹಲಿ ಭೇಟಿಗೂ-ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಸಿಎಂ ದೆಹಲಿ ಭೇಟಿಗೂ- ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿಎಂ ದೆಹಲಿ ಭೇಟಿ ಬಗ್ಗೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು, ಈಗಲೂ ಅದೇ ಮಾತುಗಳು ಕೇಳಿ ಬರುತ್ತಿವೆ, ಹಾಗಾಗಿ ದೆಹಲಿ ಭೇಟಿಗೂ ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ವಿಚಾರವಾಗಿ ಮಾತನಾಡಿದ ಅವರು, ಇನ್ನೂ ದಿನಾಂಕ ನಿಗದಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸುತ್ತಿದೆ. ಇದರ ನಡುವೆ ಅಧಿಕಾರಿಗಳು ತನಿಖೆಯ ನಡುವೆ ಇಡಿ ಅಧಿಕಾರಿಗಳು ಕಳೆದ ಶುಕ್ರವಾರ ಗುಲ್ಬರ್ಗದಲ್ಲಿ 1 ಕೋಟಿ ರೂ.ಗಳನ್ನು ಮತ್ತು ಬೆಂಗಳೂರಿನಲ್ಲಿ 2.19 ಕೋಟಿ ರೂ ವಶ ಪಡಿಸಿಕೊಂಡಿದ್ದಾರೆ.

“ಈ ತನಿಖೆಯನ್ನು ಅದರ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳಲು ಸರ್ಕಾರವು ಬದ್ಧವಾಗಿದೆ, ಯಾರನ್ನೂ ಬಿಡುವುದಿಲ್ಲ, ಸಾಕಷ್ಟು ಸಾಕ್ಷ್ಯಾಧಾರಗಳು ಇದ್ದಾಗ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರಗ, ಪಿಎಸ್‌ಐ ಹಗರಣದ ತನಿಖೆ ಮುಗಿದ ನಂತರ ಈ ಆಲೋಚನೆಯನ್ನು ಪರಿಗಣಿಸಲಾಗುವುದು ಎಂದು ಹೇಳಿದರು. “ನಾನು ಕೂಡ ಫಾಸ್ಟ್ ಟ್ರ್ಯಾಕ್ ಕೋರ್ಟ್ ಪರವಾಗಿದ್ದೇನೆ. ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡುತ್ತೇನೆ. ಏನಾಗುತ್ತದೆ ಎಂದು ನೋಡೋಣ? ‘ ಅವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೀಬೆ ಗಿಡದ ಎಲೆಗಳಲ್ಲೂ ಇದೆ ಔಷಧೀಯ ಗುಣ!

Sun May 22 , 2022
ಸೀಬೆಹಣ್ಣಿನ ಗಿಡದ ಎಲೆಗಳಲ್ಲಿ ಸಾಕಷ್ಟು ಔಷಧಿಯ ಗುಣಗಳಿವೆ. ಅಲ್ಲದೇ ಹಲವು ಪಾಲಿಫಿನಾಲ್, ಕ್ಯಾರೋಟಿನಾಯ್ಡ್, ಫ್ಲೇವನಾಯ್ಡ್ ಗಳೆಂಬ ವಿವಿಧ ಪೋಷಕಾಂಶಗಳಿದ್ದು, ಹಲವು ರೋಗಗಳ ಚಿಕಿತ್ಸೆಗೆ ನೆರವಾಗುತ್ತವೆ. ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ತಿಳಿಯಿರಿ.ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಸೀಬೆ ಎಲೆಗಳನ್ನು ಕುದಿಸಿದ ಟೀ ಮೂರು ತಿಂಗಳವರೆಗೆ ಸತತವಾಗಿ ಕುಡಿಯುವ ಮೂಲಕ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರಾಯ್ಡ್ ಎಂಬ ವಿಷ ವಸ್ತುಗಳನ್ನು ಕಡಿಮೆಗೊಳಿಸಬಹುದು. ಅತಿಸಾರವನ್ನು ಶಮನಗೊಳಿಸುತ್ತದೆ ಮಕ್ಕಳಲ್ಲಿ ಹಾಗೂ ಹಿರಿಯರಲ್ಲಿ ಅತಿಸಾರ ಮತ್ತು ಆಮಶಂಕೆಯನ್ನು […]

Advertisement

Wordpress Social Share Plugin powered by Ultimatelysocial