ಅಮರನಾಥದಲ್ಲಿ ಕನ್ನಡಿಗರು ಸುರಕ್ಷಿತ, ವಾಪಸ್ ಕರೆತರಲು ಅಧಿಕಾರಿ ನೇಮಕ: ಜ್ಞಾನೇಂದ್ರ

ಶಿವಮೊಗ್ಗ: ಅತಿವೃಷ್ಟಿಗೆ ಸಿಲುಕಿರುವ ಅಮರನಾಥದಲ್ಲಿನ ಕರ್ನಾಟಕದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರಲು ರಾಜ್ಯದಿಂದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಈಗಾಗಲೇ ಸಂಬಂಧಿಸಿದ ನೋಡಲ್ ಅಧಿಕಾರಿಗಳು ಪ್ರಯತ್ನ ಆರಂಭಿಸಿದ್ದಾರೆ.

ಒಬ್ಬರನ್ನೂ ಬಿಡದೇ ಸುರಕ್ಷಿತವಾಗಿ ಕರೆತರಲಿದ್ದೇವೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜೊತೆ ಮಾತನಾಡಲಿದ್ದೇವೆ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.

ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಸೂಚನೆ ನೀಡಿದ್ದಾರೆ. ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಹಾರ ನೀಡುವ ಪ್ರಯತ್ನ ಮಾಡಿದ್ದೇವೆ. ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿ, ತಹಶಿಲ್ದಾರ್ ಬಳಿ ಹಣ ಇದೆ. ಅದನ್ನು ಖರ್ಚು ಮಾಡಲು ಸೂಚಿಸಿದ್ದೇವೆ ಎಂದರು.

‘ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಸಹೋದರಿಯ ಆರೋಪಗಳ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಆ ಕುಟುಂಬದ ಬಗ್ಗೆ ನನಗೆ ಗೌರವ ಇದೆ. ನಾನು ಕೂಡ ತಕ್ಷಣ ಹೋಗಿ ಸಾಂತ್ವನ ಹೇಳಿದ್ದೇನೆ. ಎಲ್ಲವನ್ನು ಮಾಡಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

ಜೈಲಿನಲ್ಲಿ ಏನೋ ನಡೆಯಿತು. ಮೊಬೈಲ್ ಸಿಕ್ತು ಅಂತಾ ಇಷ್ಟೆಲ್ಲಾ ಮಾಡ್ತಿದ್ದಾರೆ. ಅವರಿಗೆ (ಹರ್ಷನ ಸಹೋದರಿ) ನಾನೊಬ್ಬ ಗೃಹ ಸಚಿವನಾಗಿ ಏನು ಮಾಹಿತಿ ಕೊಡಬಹುದಿತ್ತೋ ಅದನ್ನು ಕೊಟ್ಟಿದ್ದೇನೆ. ಆದರೆ ಅವರಿಗೆ ಯಾಕೋ ಸಮಾಧಾನ ಇಲ್ಲ. ಎಂದರು.

‘ನಾನು ಯಾರ ಬಗ್ಗೆಯೂ ಅಗೌರವ ತೋರುವುದಿಲ್ಲ. ಅವರು ನನ್ನ ಬಳಿ ಬಂದಿದ್ದರು. ನನ್ನ ಬಳಿ ಸಮಾಧಾನದಿಂದ ಮಾತನಾಡಲಿಲ್ಲ. ಶ್ರೀರಾಮಸೇನೆಯ 20 ಜನರ ಅವರ ಜೊತೆ ಬಂದಿದ್ದರು. ಅವರ ಈ ರೀತಿಯ ವರ್ತನೆಯಿಂದ ಜೊತೆಗೆ ಬಂದಿದ್ದ ಶ್ರೀರಾಮಸೇನೆಯವರಿಗೂ ಬೇಸರ ಆಗಿದೆ ಎಂದು ಹೇಳಿದರು.

ತಮ್ಮ ರಾಜೀನಾಮೆಗೆ ಹಿಂದು ಜಾಗರಣ ವೇದಿಕೆ ಆಗ್ರಹಿಸಿರುವ ವಿಚಾರದ ಬಗ್ಗೆ ಮಾತನಾಡಿ. ಗೃಹ ಸಚಿವರನ್ನು ರಾಜೀನಾಮೆ ಕೇಳದೇ ಇನ್ನು ಯಾರನ್ನು ಕೇಳುತ್ತಾರೆ ಎಂದು ನಗುತ್ತಲೇ ಉತ್ತರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ಪವಿತ್ರ ಗುಹೆಯ ಬಳಿ ಸಿಲುಕಿಕೊಂಡಿದ್ದ 15,000 ಯಾತ್ರಾರ್ಥಿಗಳನ್ನು ಕೆಳ ನೆಲೆ

Sat Jul 9 , 2022
ಶ್ರೀನಗರ, ಜು.9- ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಜಮ್ಮು ಮತ್ತು ಕಾಶ್ಮೀರದ ಅಮರನಾಥ ಪವಿತ್ರ ಗುಹೆಯ ಬಳಿ ಸಿಲುಕಿಕೊಂಡಿದ್ದ 15,000 ಯಾತ್ರಾರ್ಥಿಗಳನ್ನು ಕೆಳ ನೆಲೆ ಪಂಜತರ್ನಿಯಕ್ಕೆ ಸ್ಥಳಾಂತರಿಸಲಾಗಿದ್ದು, ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಮಂದಿ ನಾಪತ್ತೆಯಾಗಿದ್ದು ಅವರ ಪತ್ತೆ ಕಾರ್ಯ ಚುರುಕು ಗೊಳಿಸಲಾಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಸೃಷ್ಟಿಯಾಗಿದೆ. ಈವರೆಗೆ ಪತ್ತೆಯಾಗಿರುವ 16 ಮೃತದೇಹಗಳನ್ನು ಬಾಲ್ಟಾಲ್‍ಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿಯಲ್ಲಿ ಗಡಿ ಭದ್ರತಾ ಪಡೆಯ […]

Advertisement

Wordpress Social Share Plugin powered by Ultimatelysocial