*ಅಪಘಾತ ದಲ್ಲಿ ಪೊಲೀಸ್ ಸಿಬ್ಬಂದಿಗಳ ಸಾವು: ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ.*

ಇಂದು ಮುಂಜಾನೆ, ಚಿತ್ತೂರು ಸಮೀಪ, ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಮರಣ ಹೊಂದಿ, ಇತರ ಐದು ಸಿಬ್ಬಂದಿಗಳು ಗಾಯಗೊಂಡ ಘಟನೆ ಬಗ್ಗೆ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಸೂಕ್ತ ಕ್ರಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿ ಗಳಾಗಿದ್ದು, ತನಿಖೆಯ ಸಂಬಂಧ ತೆರಳುತ್ತಿದ್ದರು.

ಗಾಯಗೊಂಡ ಸಿಬ್ಬಂದಿಗಳ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು ಎಂದೂ ಸೂಚಿಸಿದ್ದಾರೆ.

ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ, ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ, ಎಂದೂ ಸಚಿವರು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರಿನ ಬಳಿ ಸಂಭವಿಸಿದ ಇನ್ನೊಂದು ಭೀಕರ ಅಪಘಾತದಲ್ಲಿ ಐದು ಮಂದಿ ಮೃತ ಪಟ್ಟ ಘಟನೆಯ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿ, ದುಃಖ ತಂದಿದೆ ಎಂದೂ ಸಚಿವರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು, ಘಟನೆಯ ಸಂಬಂಧ ತನಿಖೆಯನ್ನು ನಡೆಸಿದ್ದಾರೆ, ಎಂದೂ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯುಪಿಯ ಬುಂದೇಲ್‌ಖಂಡ್‌ನಲ್ಲಿರುವ 31 ಕೋಟೆಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲಾಗುವುದು

Sun Jul 24 , 2022
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ರಾಜ್ಯದ ಬುಂದೇಲ್‌ಖಂಡ್ ಪ್ರದೇಶದಲ್ಲಿ ನೆಲೆಗೊಂಡಿರುವ 31 ಪುರಾತನ ಕೋಟೆಗಳನ್ನು ಪ್ರವಾಸೋದ್ಯಮದ ಹೊಸ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಬುಂದೇಲ್‌ಖಂಡ್‌ನ ಸಂಪೂರ್ಣ ಪ್ರದೇಶವು ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಮತ್ತು ಅದರ ಮಹತ್ವವನ್ನು ಹೊಸ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು. ಈ ಪ್ರದೇಶದಲ್ಲಿನ ಅನೇಕ ಕೋಟೆಗಳು ವಿಸ್ತಾರವಾದ ಸಂಕೀರ್ಣಗಳನ್ನು ಹೊಂದಿವೆ ಮತ್ತು ಅತ್ಯುತ್ತಮ ಹೋಟೆಲ್‌ಗಳಾಗಿ […]

Advertisement

Wordpress Social Share Plugin powered by Ultimatelysocial