ಪಿಎಸ್‌ಐ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ!

ಬೆಂಗಳೂರು: ಪಿಎಸ್‌ಐ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ತಮ್ಮ ಬಳಿ ಅಕ್ರಮಕ್ಕೆ, ಸಂಬಂಧಿಸಿದಂತೆ ಒಂದು ತಿಂಗಳ ಹಿಂದೆಯೇ, ತಮಗೆ ಸಲ್ಲಿಕೆಯಾಗಿದೆ ಎನ್ನಲಾದ ಒಂದು ಆಡಿಯೋ ರೆಕಾರ್ಡ್‌ಅನ್ನು ಖರ್ಗೆಯವರು ಇಂದು ಬಿಡುಗಡೆ ಮಾಡಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿ ಮುಖ್ಯಮಂತ್ರಿಗಳ ಜತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

ಪ್ರಿಯಾಂಕ್ ಖರ್ಗೆಯವರು ನಂತರ ಪತ್ರಿಕಾ ಗೊಷ್ಠಿ ನಡೆಸಿದ್ದರು, ಆದರೆ ಆಡಿಯೋ ರೆಕಾರ್ಡ್ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರ ಹಾಕಿದ್ದಾರೆ. ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆಯಲ್ಲಿ ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು ಎಂದು ವ್ಯಂಗ್ಯವಾಡಿದರು.

ಈಗಲಾದರೂ ಖರ್ಗೆಯವರು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು. ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು ಎಂದು ವಿನಂತಿಸುತ್ತೇನೆ. ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ನಾಯಕರು ತನಿಖೆಗೆ ಸಹಕರಿಸಬೇಕು ಹಾಗೂ ಯಾವುದೇ ರೀತಿಯ ರಾಜಕೀಯ ಲಾಭ ಅಪೇಕ್ಷೆ ಮಾಡದೆ, ಅಕ್ರಮ ಎಸಗಿದವರನ್ನು, ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ನಂತರ ಮೊದಲ ಟ್ವೀಟ್ನಲ್ಲಿ, ಸಂದೇಶವನ್ನು ಹೊಂದಿದ್ದ,ಇಳಯರಾಜ!

Sat Apr 23 , 2022
ಖ್ಯಾತ ತಮಿಳು ಸಂಯೋಜಕ ಇಳಯರಾಜ ಅವರು ತಮ್ಮ ಇತ್ತೀಚಿನ ಟ್ವೀಟ್‌ನಲ್ಲಿ ಆಡಿಯೋವನ್ನು ಪೋಸ್ಟ್ ಮಾಡಿದ್ದಾರೆ, ಇದರಲ್ಲಿ ಅವರು ರಜನಿಕಾಂತ್ ಅವರ ಕಮಾಂಡರ್ ಚಿತ್ರದ ಸಂದೇಶವನ್ನು ಹಾಡಿದ್ದಾರೆ. “ನಾನು ನಿನ್ನನ್ನು ಬಿಡುವುದಿಲ್ಲ; ನೀವು ಹೋದರೆ ನಾನು ನಿದ್ರಿಸುವುದಿಲ್ಲ. ನಿನಗಾಗಿ ನಾನು ಹಾಡುತ್ತೇನೆ” ಎಂದು ಅವರು ಹಾಡಿದರು. ಈ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಸಕಾರಾತ್ಮಕ ಹಾಗೂ ಋಣಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ ಕೆಲವು ದಿನಗಳ ನಂತರ […]

Advertisement

Wordpress Social Share Plugin powered by Ultimatelysocial