ಸಂಪೂರ್ಣ ತನಿಖೆ ಬಳಿಕವೇ ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ –

 

ಕಲಬುರ್ಗಿ: ಪಿಎಸ್‌ಐ ನೇಮಕಾತಿ ಅಕ್ರಮ ( PSI Recruitment Scam ) ಕುರಿತಂತೆ ಸಿಐಡಿ ತನಿಖೆ ನಡೆಯುತ್ತಿದೆ. ಈಗಾಗಲೇ ಪ್ರಕರಣದಲ್ಲಿ 47 ಮಂದಿಯನ್ನು ಬಂಧಿಸಲಾಗಿದೆ. ಈ ತನಿಖೆ ಪೂರ್ಣಗೊಂಡ ಬಳಿಕವೇ ಪಿಎಸ್‌ಐ ನೇಮಕಾತಿಗಾಗಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home minister Araga Jnanendra ) ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, 545 ಪಿಎಸ್‌ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ಅಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದಕ್ಕಾಗಿ ಉತ್ತಮ ಅಧಿಕಾರಿಗಳನ್ನು ನೇಮಿಸಿದ್ದೇವೆ. ಅವರ ತನಿಖೆಯಲ್ಲಿ ಯಾವುದೇ ಅನುಮಾನವೇ ಬೇಡ. ಈ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ, ಕೈಬಿಡೋ ಪ್ರಶ್ನೆಯೇ ಇಲ್ಲವೆಂದರು.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸಾಭೀತಾಗಿದೆ. ಆದ್ರೇ.. ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ. ಈಗಾಗಲೇ ಪ್ರಕರಣ ಸಂಬಂಧ ಸಿಐಡಿ ಪೊಲೀಸರು 47 ಮಂದಿಯನ್ನು ಬಂಧಿಸಿದ್ದಾರೆ. ಓಎಂಆರ್ ಶೀಟ್ ತಿದ್ದುಪಡಿ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಸಂಪೂರ್ಣಗೊಂಡ ಬಳಿಕವೇ ಮರು ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾನು ಜನ್ಮ ದಿನಾಚರಣೆ ಆಚರಿಸಲ್ಲ,

Fri May 6 , 2022
ಬೆಂಗಳೂರು: ಮೇ.15ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ. ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ ಜಾಹೀರಾತು ಕೊಡೋ ಬದಲಾಗಿ ಕಾಂಗ್ರೆಸ್ ಪಕ್ಷದಿಂದ ( Congress Party ) ಸರ್ಕಾರದ ವಿರುದ್ಧ ನಡೆಸಿದಂತ ಹೋರಾಟ, ಪ್ರತಿಭಟನೆಗಳ ಬಗ್ಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ […]

Advertisement

Wordpress Social Share Plugin powered by Ultimatelysocial