‘ಗರೀಬ್ ಕಲ್ಯಾಣ್’ ಅನ್ನ ಯೋಜನೆಗೆ ಬ್ರೇಕ್‌.!? ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ.

ನವದೆಹಲಿ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಸೌಲಭ್ಯವನ್ನುವನ್ನು ಕೊರೊನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳಿಗೆ ನೀಡಲಾಗುತಿತ್ತು. ಈ ಇದನ್ನು ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ.

ಹಣಕಾಸು ಸಚಿವಾಲಯದ ಅಡಿಯಲ್ಲಿನ ವೆಚ್ಚಗಳ ಇಲಾಖೆ ಈ ಯೋಜನೆಯನ್ನು ಸೆಪ್ಟೆಂಬರ್ ನಂತರ ವಿಸ್ತರಿಸಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದೆ ಎನ್ನಲಾಗಿದೆ.

‘ಈ ಯೋಜನೆಯು ದೇಶದ ಮೇಲೆ ಆರ್ಥಿಕ ಹೊರೆಯನ್ನು ತುಂಬಾ ಹೆಚ್ಚಿಸುತ್ತಿದೆ. ಇದು ದೇಶದ ಆರ್ಥಿಕ ಆರೋಗ್ಯಕ್ಕೂ ಒಳ್ಳೆಯದಲ್ಲ. ಕಳೆದ ತಿಂಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿಮೆ ಮಾಡಿರುವುದು ಆದಾಯದ ಮೇಲೆ ಸುಮಾರು 1 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಹೊರೆಯಾಗಿದ್ದು, ಈ ಗ ಮತ್ತೆ ಹೆಚ್ಚಿನ ಪರಿಹಾರವನ್ನು ನೀಡಿದರೆ, ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗುತ್ತದೆ. ಈಗ ಸಾಂಕ್ರಾಮಿಕ ರೋಗದ ಪರಿಣಾಮ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಈ ಉಚಿತ ಪಡಿತರದ ಯೋಜನೆಯನ್ನು ನಿಲ್ಲಿಸಬಹುದು ಅಂತ ಹೇಳಿದೆ ಎನ್ನಲಾಗಿದೆ.

ಈ ವರ್ಷದ ಮಾರ್ಚ್ನಲ್ಲಿ, ಕೇಂದ್ರ ಸರ್ಕಾರವು ಈ ಯೋಜನೆಯನ್ನು ಸೆಪ್ಟೆಂಬರ್ 2022 ರವರೆಗೆ ವಿಸ್ತರಿಸಿತ್ತು. ಸರ್ಕಾರವು ಬಜೆಟ್ ನಲ್ಲಿ ಆಹಾರ ಸಬ್ಸಿಡಿಗಾಗಿ 2.07 ಲಕ್ಷ ಕೋಟಿ ರೂ.ಗಳನ್ನು ನಿಗದಿಪಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ರಾಹುಲ್ ಗಾಂಧಿಗೆ : ಟ್ವಿಟ್ಟರ್ ಮೂಲಕ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ !

Wed Jul 6 , 2022
  ಬೆಂಗಳೂರು: ಟ್ವಿಟ್ಟರ್ ಮೂಲಕ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಶೇರ್ ಮಾಡಿದಂತ ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ( Rahul Gandhi ) ವಿರುದ್ಧ, ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗೆ ದೂರು ನೀಡಲಾಗಿದೆ. ಈ ಸಂಬಂಧ ಗಿರೀಶ್ ಭಾರಧ್ವಜ್ ಎನ್ನುವವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆಯ ವೀಡಿಯೋವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ. ಇದು […]

Advertisement

Wordpress Social Share Plugin powered by Ultimatelysocial