ವಿಶ್ವ ಸಿರಿವಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 30ನೇ ಸ್ಥಾನಕ್ಕೆ.!

ಕೆಲ ತಿಂಗಳುಗಳ ಹಿಂದಷ್ಟೇ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕಿ ಭಾರತದ ಅತಿ ಸಿರಿವಂತ ಹಾಗೂ ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅದಾನಿ ಸಮೂಹದ ಗೌತಮ್ ಅದಾನಿ ಅವರ ಆಸ್ತಿಯಲ್ಲಿ ತೀವ್ರ ಇಳಿಕೆಯಾಗಿದೆ.ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಗೌತಮ್ ಅದಾನಿಯವರ ಸಂಪತ್ತಿನಲ್ಲಿ ಬರೋಬ್ಬರಿ 6.64 ಲಕ್ಷ ಕೋಟಿ ರೂಪಾಯಗಳು ಕಡಿಮೆಯಾಗಿದ್ದು, ಹೀಗಾಗಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅವರು ಈಗ 30ನೇ ಸ್ಥಾನಕ್ಕೆ ಕುಸಿದಿದ್ದಾರೆ.ಹಿಂಡನ್ ಬರ್ಗ್ ವರದಿ ಬಿಡುಗಡೆಗೂ ಮುನ್ನ ಗೌತಮ್ ಅದಾನಿ 9.96 ಲಕ್ಷ ಕೋಟಿ ರೂಪಾಯಿಗಳ ಆಸ್ತಿಯನ್ನು ಹೊಂದಿದ್ದು, ಈಗ 3.32 ಲಕ್ಷ ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ. ಇನ್ನು 6.78 ಲಕ್ಷ ಕೋಟಿ ರೂಪಾಯಿಗಳ ಆಸ್ತಿ ಹೊಂದಿರುವ ಮುಕೇಶ್ ಅಂಬಾನಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ.

Mon Feb 27 , 2023
  ನಿಮ್ಮ ಮಗುವಿನಂಥ ಸ್ವಭಾವ ಕಾಣಿಸಿಕೊಳ್ಳುತ್ತದೆ ಮತ್ತು ನೀವು ಒಂದು ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಹಣದ ಚಲನೆ ದಿನವಿಡೀ ಮುಂದುವರಿಯುತ್ತದೆ ಮತ್ತು ದಿನದ ಅಂತ್ಯದ ನಂತರ ನೀವು ಉಳಿಸಲು ಸಾಧ್ಯವಾಗುತ್ತದೆ. ನಿಮ್ಮ ಕುಟುಂಬ ಸದಸ್ಯರೆಡೆಗೆ ನಿಮ್ಮ ಸರ್ವಾಧಿಕಾರಿ ಧೋರಣೆ ಕೇವಲ ಅನುಪಯುಕ್ತ ವಾದಗಳನ್ನು ಪ್ರಾರಂಭಿಸುತ್ತದೆ ಮತ್ತು ಇದು ಟೀಕೆಯನ್ನೂ ತರಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ […]

Advertisement

Wordpress Social Share Plugin powered by Ultimatelysocial