ಗೀತಾ ನಾಗಭೂಷಣ

 
ಗೀತಾ ನಾಗಭೂಷಣ ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾದವರು.
ಗೀತಾ ನಾಗಭೂಷಣರು ಕಲ್ಬುರ್ಗಿ ಜಿಲ್ಲೆಯ ಹಿಂದುಳಿದ ಪುಟ್ಟ ಹಳ್ಳಿಯಲ್ಲಿ 1942ರ ಮಾರ್ಚ್ 25ರಂದು ಜನಿಸಿದರು. ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡಬಿಡದ ಪರಿಶ್ರಮದಿಂದ ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನು ಗಳಿಸಿ ಬಹುಕಾಲ ಅಧ್ಯಾಪನ ವೃತ್ತಿಯನ್ನು ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು.
ಡಾ. ಗೀತಾ ನಾಗಭೂಷಣ ಅವರು 1968ರ ವರ್ಷದಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಕಾದಂಬರಿಯಿಂದ ಮೊದಲ್ಗೊಂಡು ‘ಬದುಕು’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದರು. ಅವರ ‘ಬದುಕು’ ಕಾದಂಬರಿಗೆ 2004ರ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿತು. ಗೀತಾ ನಾಗಭೂಷಣರ ‘ಹಸಿಮಾಂಸ ಮತ್ತು ಹದ್ದುಗಳು’ ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಯಿತು. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.
ಗುಲ್ಬರ್ಗ ವಿಶ್ವವಿದ್ಯಾಲಯದ ಡಾಕ್ಟರೇಟ್, ಅತ್ತಿಮಬ್ಬೆ ಪ್ರಶಸ್ತಿ, ನಾಡೋಜ ಪ್ರಶಸ್ತಿ ಮುಂತಾದ ಹಲವಾರು ಗೌರವಗಳ ಜೊತೆಗೆ, ಡಾ. ಗೀತಾ ನಾಗಭೂಷಣರು ಗದಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಗೀತಾನಾಗಭೂಷಣರು ಕನ್ನಡಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿಯನ್ನೂ ತಂದುಕೊಟ್ಟರು.
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯಲ್ಲಿ ಡಾ. ಗೀತಾ ನಾಗಭೂಷಣರು ಹೇಳಿದ ಮಾತುಗಳು ಮಾರ್ಮಿಕವಾಗಿವೆ. “ವಚನಕಾರರು, ಹರಿದಾಸರು, ತತ್ವಪದಕಾರರು, ಜನಪದರು ಅಂದು ತಮ್ಮ ಸಾಹಿತ್ಯದಿಂದ ಸಾವಿರಾರು ವರ್ಷಗಳ ಉದ್ದಕ್ಕೂ ಮಾಡಿಕೊಂಡು ಬಂದ ಜನಜಾಗೃತಿ, ಶಾಂತಿ ಸೌಹಾರ್ದತೆ, ಪ್ರೀತಿ ವಾತ್ಸಲ್ಯ, ಕ್ರಾಂತಿ ಚಳುವಳಿಗಳ ಮೂಲಕ ಸುಧಾರಣೆ ಮತ್ತು ಜನಹಿತಕಾರ್ಯವನ್ನು ಇಂದಿನ ಸಾಹಿತಿಗಳೂ ಸಾಧಿಸಿ ತೋರಿಸಬೇಕಾಗಿದೆ. ಬರೀ ಶಬ್ದಾಡಂಬರದ ರಂಜನೀಯ ಸಾಹಿತ್ಯ ನಮಗೆ ಬೇಡ, ಸಾಹಿತ್ಯ ಒಂದು ಮಾನಸಿಕ ಸುಧಾರಣೆಯ ಸಾಧನ. ಅದು ಸಮಾಜದ ಅಭ್ಯುದಯಕ್ಕಾಗಿ ದುಡಿಯುವಂತಾಗಬೇಕು. ವಿಜ್ಞಾನಿಯ ತಲೆ, ಸಂತನ ಹೃದಯ ಈ ದೇಶಕ್ಕೆ ಬೇಕು. ಬುದ್ಧನ ಕರುಣೆ, ಬಸವನ ಛಲ, ಬಾಬಾ ಸಾಹೇಬರ ಸ್ವಾಭಿಮಾನ ಮತ್ತು ಗಾಂಧೀಜಿಯ ಅಹಿಂಸೆಯ ತುಡಿತ ಈ ಎಲ್ಲವನ್ನೂ ಹುರಿಗೊಳಿಸಿ ಹೊಸೆದ ಹಗ್ಗದಿಂದಲೇ ನಾವು ಸರ್ವರ ಅಭ್ಯುದಯ ಸಾಧಿಸಬಲ್ಲ ನಭೋಸ್ಪರ್ಶಿ ವ್ಯವಸ್ಥೆಗೆ ಏಣಿ ಕಟ್ಟಬೇಕಾಗಿದೆ.”
ನಮ್ಮ ಈ ಅಪೂರ್ವ ಹಿರಿಯ ಬರಹಗಾರ್ತಿ ಡಾ. ಗೀತಾ ನಾಗಭೂಷಣರು 2020ರ ಜೂನ್ 28ರಂದು ಈ ಲೋಕವನ್ನಗಲಿದರು.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂಬೈನಲ್ಲಿ ಐಪಿಎಲ್ಗೆ ಬೆದರಿಕೆ ಇದೆ ಎಂಬ ವರದಿಗಳು ಆಧಾರರಹಿತವಾಗಿವೆ ಎಂದ,ಮಹಾರಾಷ್ಟ್ರ ಗೃಹ ಸಚಿವ!

Fri Mar 25 , 2022
ಮುಂಬೈನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ-ಪಾಟೀಲ್ ಅವರು ಗುರುವಾರ ವಿಧಾನಸಭೆಯಲ್ಲಿ ಮಾಧ್ಯಮಗಳ ವಿಭಾಗದ ವರದಿಗಳನ್ನು ನಿರಾಕರಿಸಿದರು. ಟಿ20 ಕ್ರಿಕೆಟ್ ಅದ್ದೂರಿ ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಹಿಂದಿನ ದಿನ, ಮುಂಬೈ ಪೊಲೀಸರು ಕೂಡ ಪಂದ್ಯಾವಳಿಯ ಸಮಯದಲ್ಲಿ ಯಾವುದೇ ಭಯೋತ್ಪಾದಕ ಬೆದರಿಕೆಯ ಬಗ್ಗೆ ನಮಗೆ ಯಾವುದೇ ಗುಪ್ತಚರ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ‘ಮುಂಬೈನಲ್ಲಿ ಐಪಿಎಲ್‌ಗೆ […]

Advertisement

Wordpress Social Share Plugin powered by Ultimatelysocial