ಪರಿಹಾರಕ್ಕಾಗಿ ಮಹಿಳೆಯರಿಂದ ಶಿಗ್ಗಾವಿ ಚಲೋ ಪಾದಯಾತ್ರೆ.‌‌‌‌..!

ರಾಣೆಬೆನ್ನೂರು ನಗರದಿಂದ ಶಿಗ್ಗಾವಿ ಪಟ್ಟಣದವರೆಗೂ ಎರಡನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ.ಡಾ. ಶಾಂತ ಎಂಬುವರಿಂದ ಅನಗತ್ಯ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಂತ್ರಸ್ಥ ಮಹಿಳೆಯರಿಂದ ಪಾದಯಾತ್ರೆ.

ರಾಣೇಬೆನ್ನೂರು ನಗರದಿಂದ ಹಾವೇರಿ ತಾಲ್ಲೂಕಿನ ನೆಲೋಗಲ್ ತಲುಪಿದ ಪಾದಯಾತ್ರೆ.ಬಡ ಮಹಿಳೆಯರಿಗೆ ಅನಗತ್ಯ ಗರ್ಭಕೋಶ ಶಸ್ತ್ರ ಚಿಕಿತ್ಸೆ ಮಾಡಿದ ಆರೋಪ ಡಾ. ಶಾಂತ ಮೇಲಿದೆ.

ಹಲವು ವರ್ಷಗಳ ಹಿಂದೆ 1520 ಮಹಿಳೆಯರಿಗೆ ಅನಗತ್ಯ ಗರ್ಭಕೋಶ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಎಂಬ ಆರೋಪ.ರಾಣೆಬೆನ್ನೂರಿನಲ್ಲಿ ಜನರಲ್ ಸರ್ಜನ್ ಆಗಿದ್ದ ಡಾ. ಶಾಂತ ಪಂದನ್ನಾರ್.

1,520 ಮಹಿಳೆಯರ ಗರ್ಭಕೋಶ ಗರ್ಭಕೋಶಗಳನ್ನು ತೆಗೆದು ಹಾಕಿದ್ದಾರೆ.ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆಂಬ ಪ್ರಮುಖ ಆರೋಪ ಕೇಳಿ ಬಂದಿತ್ತು.

ಈಗ ಗರ್ಭಕೋಶ ತೆಗೆಸಿಕೊಂಡ ಮಹಿಳೆಯರು ಅತಂತ್ರರಾಗಿದ್ದಾರೆ.ದುಡಿಯೋಕೂ ಬಾರದೇ ,ಇನ್ನಿತರ ಅನಾರೋಗ್ಯ ಸಮಸ್ಯೆಗಳಿಗೆ ಸಿಲುಕಿರುವ ಮಹಿಳೆಯರು…

ಮಂಡಿನೋವು, ಸೊಂಟ ನೋವು, ಕಣ್ಣಿನ ದೃಷ್ಟಿ ಸಮಸ್ಯೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಸಿಲುಕಿ ನರಳುತ್ತಿರುವ ಸ್ತ್ರೀಯರು…

ತಮಗೆ ಮಾಸಾಶನ,ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸಿಎಂ ಗಮನ ಸೆಳೆಯಲು ಪಾದಾಯಾತ್ರೆ…

ಜೊತೆಗೆ ಅನಗತ್ಯ ಗರ್ಭಕೋಶ ಶಸ್ತ್ರಚಿಕಿತ್ಸೆ ಪ್ರಕರಣ ಸಿ.ಬಿ.ಐ ಗೆ ವಹಿಸುವಂತೆ ಆಗ್ರಹಿಸಿ ಪಾದಯಾತ್ರೆ…

ಸಿಎಂ ಕ್ಷೇತ್ರ ಶಿಗ್ಗಾವಿವರೆಗೂ ಪಾದಯಾತ್ರೆ ಹಮ್ಮಿಕೊಂಡಿರುವ ಮಹಿಳೆಯರು…

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನ ಗಾಂಧಿ ಬಜಾರ್ನಲ್ಲಿ ಪುನರಾಭಿವೃದ್ಧಿ ಯೋಜನೆ ಕುರಿತು ಗೊಂದಲ!

Wed Apr 27 , 2022
ಐಕಾನಿಕ್ ಗಾಂಧಿ ಬಜಾರ್ ಮುಖ್ಯ ರಸ್ತೆಯು ಈಗ DULT ನಿಂದ ಅನುಮೋದಿಸಲ್ಪಟ್ಟ ಮತ್ತು BBMP ಯಿಂದ ಜಾರಿಗೆ ತಂದಿರುವ ಪುನರಾಭಿವೃದ್ಧಿ ಯೋಜನೆಯ ಕೇಂದ್ರಬಿಂದುವಾಗಿದೆ, ಇದು ವಾಹನಗಳನ್ನು ನಿಷೇಧಿಸುತ್ತದೆ ಮತ್ತು ರಸ್ತೆಯಲ್ಲಿ ಪಾದಚಾರಿಗಳನ್ನು ಮಾಡುತ್ತದೆ. ಕಳೆದ ವಾರ, ಈ ಯೋಜನೆ ವಿರೋಧಿಸಿ ನಿವಾಸಿಗಳು ಮತ್ತು ಮಾರಾಟಗಾರರು ಪ್ರತಿಭಟನೆ ನಡೆಸಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial