₹ 17,696 ಕೋಟಿ ಹಿಂದಕ್ಕೆ ಪಡೆದ ವಿದೇಶಿ ಬಂಡವಾಳ ಹೂಡಿಕೆದಾರರು

ಓಮೈಕ್ರಾನ್ ಆತಂಕ: ₹ 17,696 ಕೋಟಿ ಹಿಂದಕ್ಕೆ ಪಡೆದ ವಿದೇಶಿ ಬಂಡವಾಳ ಹೂಡಿಕೆದಾರರು

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಡಿಸೆಂಬರ್ 1 ರಿಂದ 17ರವರೆಗಿನ ಅವಧಿಯಲ್ಲಿ ಭಾರತದ ಬಂಡವಾಳ ಮಾರುಕಟ್ಟೆಯಿಂದ ₹ 17,696 ಕೋಟಿ ಹಿಂದಕ್ಕೆ ಪಡೆದಿದ್ದಾರೆ.

ಓಮೈಕ್ರಾನ್‌ ಸೃಷ್ಟಿಸಿರುವ ಆತಂಕದ ಜೊತೆಗೆ ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಸ್ವತ್ತು ಖರೀದಿಸುವ ಪ್ರಕ್ರಿಯೆಯನ್ನು ಶೀಘ್ರವೇ ನಿಲ್ಲಿಸುವ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ವ್ಯಕ್ತವಾಗಿದೆ.

ಈ ಕಾರಣಗಳಿಂದಾಗಿ ಬಂಡವಾಳ ಹೊರಹರಿವು ಕಂಡುಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಹೂಡಿಕೆದಾರರು ₹ 13,470 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 4,066 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ. ನವೆಂಬರ್‌ ತಿಂಗಳಿನಲ್ಲಿ ₹ 2,521 ಕೋಟಿ ಮೌಲ್ಯದ ಬಂಡವಾಳ ಹಿಂದಕ್ಕೆ ಪಡೆದಿದ್ದರು.

ದೇಶಿ ಮತ್ತು ಜಾಗತಿಕ ಮಟ್ಟದಲ್ಲಿ ಅನಿಶ್ಚಿತ ಸ್ಥಿತಿಯು ಮುಂದುವರಿದಿದೆ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ತಿಳಿಸಿದ್ದಾರೆ.

ಕೊರೊನಾದ ಹೊಸ ತಳಿ ಓಮೈಕ್ರಾನ್‌ ಅತ್ಯಂತ ವೇಗವಾಗಿ ಹರಡುತ್ತಿರುವುದು ಆತಂಕ ಸೃಷ್ಟಿಸಿದ್ದು, ಜಾಗತಿಕ ಆರ್ಥಿಕ ಬೆಳವಣಿಗೆಯ ಮುನ್ನೋಟದ ಮೇಲೆ ಪರಿಣಾಮ ಉಂಟುಮಾಡುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಭಾರತದಂತಹ ಪ್ರವರ್ಧಮಾನನಕ್ಕೆ ಬರುತ್ತಿರುವ ದೇಶಗಳಿಂದ ಬಂಡವಾಳ ಹೊರಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾರ್ಚ್‌ ಅಂತ್ಯಕ್ಕೆ ಅನುಮಾನ- ಮರ್ಚೆಂಟ್‌ ಬ್ಯಾಂಕ್‌ ಅಧಿಕಾರಿ

Mon Dec 20 , 2021
ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಆರಂಭಿಕ ಸಾರ್ವಜನಿಕ ಹೂಡಿಕೆಯು (ಐಪಿಒ) ಪ್ರಸಕ್ತ ಹಣಕಾಸು ವರ್ಷದ ಮಾರ್ಚ್‌ ಅಂತ್ಯದ ವೇಳೆಗೆ ನಡೆಯುವುದು ಅನುಮಾನ ಎಂದು ಮರ್ಚೆಂಟ್‌ ಬ್ಯಾಂಕ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಮೌಲ್ಯಮಾಪನ ಮಾಡಲು ನಿರೀಕ್ಷೆಗಿಂತಲೂ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಪೂರ್ವಸಿದ್ಧತಾ ಕಾರ್ಯವು ಇನ್ನೂ ಮುಗಿದಿಲ್ಲ ಎಂದು ಅವರು ತಿಳಿಸಿದ್ದಾರೆ. ಎಲ್‌ಐಸಿಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಆ ಬಳಿಕ ನಿಯಂತ್ರಣ ವ್ಯವಸ್ಥೆಗೆ […]

Advertisement

Wordpress Social Share Plugin powered by Ultimatelysocial