ಚಿನ್ನದ ಬೆಲೆ ಏರಿಕೆ;

Bengaluru : ದೇಶದ ವಿವಿಧ ನಗರಗಳಲ್ಲಿ ಜನವರಿ 22ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,650 ರೂ ಇದೆ.

ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,560 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,560ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ47,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಚೆನ್ನೈನಲ್ಲಿ 45,880ರೂ. ಹಾಗೂ ಅಪರಂಜಿ 50,050ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಎಂಸಿಎಕ್ಸ್‌ನಲ್ಲಿ ಜನವರಿ 22ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48236.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ -4.50ರಷ್ಟುಇಳಿಕೆಯಾಗಿ 1,834.58 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.06ರಷ್ಟು ಏರಿಕೆಯಾಗಿ 24.45 ಯುಎಸ್ ಡಾಲರ್ ಆಗಿದೆ.

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,900ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,600 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ROCKING STAR YASH:ಮಗಳಿಗೆ ಅ,ಆ,ಇ,ಈ ಕಲಿಸಿದ ರಾಕಿಂಗ್ ಸ್ಟಾರ್ ಯಶ್;

Sat Jan 22 , 2022
ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್‌ ಅವರಂತೆಯೇ ಅವರ ಮಕ್ಕಳು ಕೂಡ ಫೇಮಸ್. ಐರಾ ಮತ್ತು ಯಥರ್ವ್ ಇಬ್ಬರು ಕೂಡ ಕರುನಾಡ ಜನರ ಮುದ್ದಿನ ಮಕ್ಕಳು. ತಮ್ಮ ಮಕ್ಕಳು ಫೋಟೊ ಮತ್ತು ವಿಡಿಯೋಗಳನ್ನು ಯಶ್ ಹಾಗು ರಾಧಿಕ ಪಂಡಿತ್ ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. KGF 2 ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಅಧೀರ ಸಂಜಯ್ ದತ್ ಐರಾ ಮತ್ತು ಯಥರ್ವ್ ಇಬ್ಬರ ಮುದ್ದಾದ […]

Advertisement

Wordpress Social Share Plugin powered by Ultimatelysocial