SMART PHONE:ವಿವೋ T1 5G ಸ್ಮಾರ್ಟ್‌ಫೋನ್‌ ಬಿಡುಗಡೆ;

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವೋ ಕಂಪೆನಿ ತನ್ನ ವಿಭಿನ್ನ ಮಾದರಿಯ ಫೋನ್‌ಗಳಿಂದ ಪ್ರಸಿದ್ಧಿ ಪಡೆದಿದೆ. ಈಗಾಗಲೆ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ವಿವೋ T1 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ವಿವೋ T1 5G ಸ್ಮಾರ್ಟ್‌ಫೋನ್‌
ಹೌದು, ವಿವೋ ಕಂಪೆನಿ ಹೊಸ ವಿವೋ T1 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು 6.58 ಇಂಚಿನ ಫುಲ್‌ HD+ IPS LCD ಡಿಸ್‌ಪ್ಲೇ ಹೊಂದಿದೆ. ಜೊತೆಗೆ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಪಡೆದಿದೆ. ಈ ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ವಿವೋ T1 5G ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು IPS LCD ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಇದು ಸ್ನಾಪ್‌ಡ್ರಾಗನ್‌ 695 5G SoC ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ಫನ್‌ ಟಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ವಿವೋ T1 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ f/2.4 ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ ಸೂಪರ್ ನೈಟ್ ಮೋಡ್ ಮತ್ತು ಮಲ್ಟಿ ಸ್ಟೈಲ್ ಪೋರ್ಟ್ರೇಟ್ ಮೋಡ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ವಿವೋ T1 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.1, USB ಟೈಪ್-C, ಮತ್ತು USB OTG ಸೇರಿವೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಇ-ದಿಕ್ಸೂಚಿ, ವರ್ಚುವಲ್ ಗೈರೊಸ್ಕೋಪ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ T1 5G ಸ್ಮಾರ್ಟ್‌ಫೋನ್‌ 4GB + 128GB ಸ್ಟೋರೇಜ್ ಮಾದರಿಗೆ 15,990ರೂ.ಗೆ ನಿಗದಿಪಡಿಸಲಾಗಿದೆ. ಇನ್ನು 6GB + 128GB ಮತ್ತು 8GB + 128GB ಸ್ಟೋರೇಜ್ ರೂಪಾಂತರದ ಬೆಲೆ ಕ್ರಮವಾಗಿ 16,990ರೂ. ಮತ್ತು 19,990.ರೂ ಆಗಿದೆ. ಈ ಸ್ಮಾರ್ಟ್‌ಫೋನ್‌ ರೇನ್‌ಬೋ ಫ್ಯಾಂಟಸಿ ಮತ್ತು ಸ್ಟಾರ್‌ಲೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಫೆಬ್ರವರಿ 14 ರಂದು ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SMART PHONE:ಪೊಕೊ M4 ಪ್ರೊ 5G ಭಾರತದಲ್ಲಿ ಬಿಡುಗಡೆ;

Wed Feb 9 , 2022
ಪೊಕೊ ಕಂಪನಿಯು ಕಡಿಮೆ ಅವಧಿಯಲ್ಲಿ ಭಿನ್ನ ಮೊಬೈಲ್ ಶ್ರೇಣಿಯ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಪೊಕೊ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಇತ್ತೀಚಿನ ಪೊಕೊ M3 ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ ಮತ್ತು ಬೆಲೆಯಿಂದ ಹೆಚ್ಚು ಸದ್ದು ಮಾಡಿದೆ. ಡಿಸ್‌ಪ್ಲೇ ರಚನೆ ಹೇಗೆ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz […]

Advertisement

Wordpress Social Share Plugin powered by Ultimatelysocial