ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ: ಇಂಡಿಯಾ ಟುಡೇ ವರದಿ

ಗ್ಯಾನವಾಪಿ ಮಸೀದಿಯ ವೀಡಿಯೋ ಚಿತ್ರೀಕರಣವು ಪೂರ್ಣಗೊಂಡಿದ್ದು ನಂದಿಯ ಎದುರಿನಲ್ಲಿರುವ ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದು ಪರ ವಕೀಲರು ಹೇಳಿದ್ದಾರೆ.

ಈ ಕುರಿತು ಇಂಡಿಯಾ ಟುಡೇ ಮಾಧ್ಯಮಕ್ಕೆ ವಕೀಲ ವಿಷ್ಣು ಜೈನ್ ಫೋನ್‌ ನಲ್ಲಿ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಿವಲಿಂಗ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅದರ ರಕ್ಷಣೆಗೆ ಸಿವಿಲ್‌ ಕೋರ್ಟ್‌ ಮೊರೆ ಹೋಗುವುದಾಗಿ ವಕೀಲರು ತಿಳಿಸಿದ್ದಾರೆ.

ದೆಹಲಿ ಮೂಲದ ಮಹಿಳೆಯರಾದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರ ಇಬ್ಬರು ಸೇರಿದಂತೆ ಒಟ್ಟೂ ಐದು ಮಂದಿ ಗ್ಯಾನವಾಪಿ ಮಸೀದಿಯ ಹೊರ ಗೋಡೆಗಳ ಮೇಲಿನ ಹಿಂದೂ ದೇವತೆಗಳ ವಿಗ್ರಹಗಳ ಮುಂದೆ ದೈನಂದಿನ ಪ್ರಾರ್ಥನೆಗೆ ಅನುಮತಿ ಕೋರಿ ನ್ಯಾಯಾಲಯದಲ್ಲಿಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿಯ ಜಾಗದಲ್ಲಿ ಹಿಂದು ಮಂದಿರದ ಅವಶೇಷಗಳ ಕುರಿತು ಸತ್ಯಾನ್ವೇಷಣೆ ನಡೆಸಲು ವಿಡಿಯೊ ಸಮೀಕ್ಷೆಗೆ ಆದೇಶ ನೀಡಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BIGG NEWS : ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಮರ ವೋಟುಗಳು ಬೇಡ : ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ

Mon May 16 , 2022
ಮಂಗಳೂರು : ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಂಮರ ವೋಟುಗಳು ಬೇಡ ಎಂದು ವೆಳ್ತಂಗಡಿ ಬಿಜೆಪಿ ಶಾಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಮರ ವೋಟುಗಳು ಬೇಡ. ಹಿಂದೂ ವೋಟುಗಳಿದ್ದರೆ ಸಾಕು. ಇದನ್ನು ಬಹಿರಂಗವಾಗಿಯೇ ಹೇಳುತ್ತಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್‌ಆರೆ. ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳ ಮೇಲಿನ ನಿರ್ಬಂಧ ಅಜಾನ್ ವಿವಾದದ […]

Advertisement

Wordpress Social Share Plugin powered by Ultimatelysocial