GOA ELECTION:ಗೋವಾದಲ್ಲಿ ಬಿಜೆಪಿ ಗೆಲುವು;

ಪಣಜಿ, ಜನವರಿ 30; ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸುಲಭವಾಗಿ ಅಧಿಕಾರ ಹಿಡಿಯಲಿದೆ ಎಂದು ಇತ್ತೀಚಿನ ಸಮೀಕ್ಷೆ ಹೇಳಿದೆ. 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಪುನಃ ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

40 ಸದಸ್ಯ ಬಲದ ವಿಧಾನಸಭೆಯಲ್ಲಿ ಪಕ್ಷವೊಂದು ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 21. ಚುನಾವಣೆಯಲ್ಲಿ ಬಿಜೆಪಿ 20-23 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪುನಃ ಸರ್ಕಾರ ರಚನೆ ಮಾಡಲಿದೆ ಎಂದು ಸಮೀಕ್ಷೆ ವರದಿ ಅಂದಾಜಿಸಿದೆ.

ಯಾರಿಗೆ ಎಷ್ಟು ಸೀಟು?

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 4-6 ಸೀಟು, ಎಎಪಿ ಪಕ್ಷ 6-10 ಸೀಟು ಗೆಲ್ಲಲಿದೆ. ಪಕ್ಷೇತರ ಅಭ್ಯರ್ಥಿಗಳು 5-6 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಎಎಪಿ ಗೋವಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ. ಭಂಡಾರಿ ಸಮುದಾಯಕ್ಕೆ ಸೇರಿದ, ವಕೀಲರಾಗಿರುವ ಅಮಿತ್ ಪಾಲೇಕರ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತ ಹೆಚ್ಚಿನ ಸ್ಥಾನ ಎಎಪಿಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ

ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಅಧಿಕಾರ ರಚನೆ ಮಾಡುವ ಜೊತೆಗೆ ಶೇ 32.64ರಷ್ಟು ಮತಗಳನ್ನು ಪಡೆಯಲಿದೆ. ಕಾಂಗ್ರೆಸ್ ಶೇ 16.74ರಷ್ಟು ಮತ ಪಡೆಯಲಿದೆ. ಎಎಪಿ ಶೇ 24.85ರಷ್ಟು ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ. ಗೋವಾದ ಪ್ರಾದೇಶಿಕ ಪಕ್ಷ ಎಂಜಿಪಿ ಶೇ 7.74ರಷ್ಟು ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಶೇ 2.12ರಷ್ಟು ಮ ಪಡೆಯುವ ನಿರೀಕ್ಷೆ ಇದೆ.

ಅತಂತ್ರ ಫಲಿತಾಂಶ

ಇದುವರೆಗೂ ಗೋವಾದ ಚುನಾವಣೆ ಕುರಿತು ಬಂದಿರುವ ಚುನಾವಣಾ ಪೂರ್ವ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಹೇಳಿದ್ದವು. ಬಿಜೆಪಿ ಬಹುದೊಡ್ಡ ಪಕ್ಷವಾದರೂ ಸರ್ಕಾರ ರಚನೆ ಮಾಡುವ ಮ್ಯಾಜಿಕ್ ನಂಬರ್ ಬರುವುದಿಲ್ಲ ಎಂಬ ವರದಿ ಬಂದಿತ್ತು.

ಇದೇ ಮೊದಲ ಬಾರಿಗೆ ಗೋವಾ ಬಿಜೆಪಿ 40 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ 13 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಆದರೆ ಬೇರೆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 22+ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮತ್ತೆ ಸರ್ಕಾರ ರಚನೆ ಮಾಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಈ ಬಾರಿಯ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ರಾಜ್ಯದ ಪ್ರಾದೇಶಿಕ ಪಕ್ಷಗಳ ಜೊತೆ ಟಿಎಂಸಿ, ಎಎಪಿ ಸಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಫೆಬ್ರವರಿ 14ರಂದು ನಡೆಯುವ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜನವರಿ 28 ಕೊನೆಯ ದಿನವಾಗಿತ್ತು.

40 ಸದಸ್ಯ ಬಲದ ಗೋವಾ ವಿಧಾನಸಭೆ ಚುನಾವಣೆಗೆ 332 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಜನವರಿ 31 ಕೊನೆಯ ದಿನವಾಗಿದೆ. ನಾಮಪತ್ರ ವಾಪಸ್ ಪಡೆದ ಬಳಿಕ ಕಣದಲ್ಲಿ ಉಳಿಯುವ ಅಂತಿಮ ಅಭ್ಯರ್ಥಿಗಳ ಚಿತ್ರಣ ಲಭ್ಯವಾಗಿದೆ.

ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸಲು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. 4 ಸಭೆಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಫೆಬ್ರವರಿ 14ರಂದು ಚುನಾವಣೆ ನಡೆದರೂ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

RAILWAY:ಶ್ರೀರಂಗಪಟ್ಟಣದಲ್ಲಿ ರೈಲುಗಳನ್ನು ನಿಲುಗಡೆ ಮಾಡಬೇಕು ಎಂದು ಒತ್ತಾಯ;

Sun Jan 30 , 2022
ಶ್ರೀರಂಗಪಟ್ಟಣ ನಿಲ್ದಾಣದಲ್ಲಿ ಎಲ್ಲಾ ರೈಲುಗಳನ್ನು ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಸಂಸದೆ ಸುಮಲತಾಗೆ ಈ ಕುರಿತು ಜಿಲ್ಲಾ ರಕ್ಷಣಾ ವೇದಿಕೆ ಮನವಿ ಸಲ್ಲಿಕೆ ಮಾಡಿದೆ. ಪ್ಯಾಸೆಂಜರ್, ಪುಶ್-ಪುಲ್‌ ಸೇರಿದಂತೆ ಕೆಲವು ರೈಲುಗಳು ಮಾತ್ರ ಶ್ರೀರಂಗಪಟ್ಟಣ ನಿಲ್ದಾಣದಲ್ಲಿ ನಿಲುಗಡೆಗೊಳ್ಳುತ್ತಿವೆ. ಇದರಿಂದ ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳುವ ಜನರಿಗೆ ಅನಾನುಕೂಲವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಎಕ್ಸ್‌ಪ್ರೆಸ್ ರೈಲುಗಳು ಶ್ರೀರಂಗಪಟ್ಟಣ ನಿಲ್ದಾಣಗಳಲ್ಲಿ ನಿಲ್ಲಿಸುತ್ತಿಲ್ಲ. ರೈಲು ಏರಲು ಲಗೇಜ್ ಹಿಡಿದು ಬರುವ ಪ್ರಯಾಣಿಕರಿಗೆ […]

Advertisement

Wordpress Social Share Plugin powered by Ultimatelysocial