ಪಾಕಿಸ್ತಾನದಲ್ಲಿ ತೀವ್ರ ಆಹಾರ ಬಿಕ್ಕಟ್ಟು

ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಈ ಹಿಂದೆ ಎಂದೂ ಕಂಡರಿಯದಂಥ ಆಹಾರ ಬಿಕ್ಕಟ್ಟು ತಲೆದೋರಿದೆ. ಗೋದಿ ಹಾಗೂ ಗೋದಿ ಹಿಟ್ಟಿನ ಕೊರತೆಯಿಂದ ಜನತೆ ಬೀದಿಗಿಳಿದು ಹೋರಾಟ ನಡೆಸುವಂತಾಗಿದೆ. ಗೋದಿ ಹಿಟ್ಟಿನ ಬೆಲೆಗಳು ಜನಸಾಮಾನ್ಯರ ಕೈಗೆಟುಕದಂತಾಗಿ ಬಡವರು ಉಪವಾಸ ಬೀಳುವ ಸ್ಥಿತಿ ಎದುರಾಗಿದೆ.ಪಾಕಿಸ್ತಾನವು ತನ್ನ ಇತಿಹಾಸದಲ್ಲೇ ಅತಿ ಕೆಟ್ಟ ಹಿಟ್ಟಿನ ಕೊರತೆಯ ಸಮಸ್ಯೆ ಎದುರಿಸುತ್ತಿದೆ. ಗೋದಿಗಾಗಿ ದೇಶದ ಎಲ್ಲ ಭಾಗದಲ್ಲೂ ಹಾಹಾಕಾರ ಉಂಟಾಗಿದ್ದು, ಖೈಬರ್ ಪಖ್ತುನಖ್ವಾ, ಸಿಂಧ್ ಮತ್ತು ಬಲೂಚಿಸ್ತಾನ ಪ್ರಾಂತ್ಯಗಳಲ್ಲಿ ಗೋದಿ ಹಿಟ್ಟು ಪಡೆಯಲು ನೂಕುನುಗ್ಗಲು ಉಂಟಾಗಿ ಕಾಲ್ತುಳಿತದ ಘಟನೆಗಳು ನಡೆದ ಬಗ್ಗೆ ವರದಿಯಾಗಿವೆ. ಪಾಕಿಸ್ತಾನದ ಪ್ರಮುಖ ಮಾಧ್ಯಮವೊಂದರ ವರದಿಯ ಪ್ರಕಾರ, ಮಾರುಕಟ್ಟೆಯಲ್ಲಿ ಸಿಗುವ ಸಬ್ಸಿಡಿ ಇರುವ ಹಿಟ್ಟಿನ ಚೀಲಗಳನ್ನು ಪಡೆದುಕೊಳ್ಳಲು ಜನತೆ ಪ್ರತಿದಿನ ಹತ್ತಾರು ಗಂಟೆಗಳ ಕಾಲ ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ಸಬ್ಸಿಡಿ ಹಿಟ್ಟಿನ ಚೀಲಗಳ ಕೊರತೆಯಿಂದ ಅಷ್ಟು ಕಾದರೂ ಜನರಿಗೆ ಅವು ಸಿಗುತ್ತಿಲ್ಲ.ಶಸ್ತ್ರಸಜ್ಜಿತ ಯೋಧರ ಬೆಂಗಾವಲಿನಲ್ಲಿ ಮಿನಿ ಟ್ರಕ್‌ಗಳು ಮತ್ತು ವ್ಯಾನ್‌ಗಳು ಹಿಟ್ಟು ಹಂಚಲು ಹೋಗುತ್ತಿರುವಾಗ ವಾಹನಗಳ ಸುತ್ತಲೂ ಜನರು ಜಮಾಯಿಸಿ ಪರಸ್ಪರ ತಳ್ಳಾಟ ನಡೆಸಿರುವ ದೃಶ್ಯಗಳು ಕಾಣಿಸುತ್ತಿವೆ. ಹಿಟ್ಟಿನ ವ್ಯಾಪಾರ ಕೇಂದ್ರಗಳು ಮತ್ತು ತಂದೂರ್‌ಗಳಲ್ಲಿ ಹಲವಾರು ಘರ್ಷಣೆಗಳು ನಡೆದ ಬಗ್ಗೆ ವರದಿಯಾಗಿವೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಗೋಧಿ ಮತ್ತು ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಕರಾಚಿಯಲ್ಲಿ ಹಿಟ್ಟು ಪ್ರತಿ ಕಿಲೋಗ್ರಾಂಗೆ 140 ರೂ.ನಿಂದ 160 ರೂ.ಗೆ ಮಾರಾಟವಾಗುತ್ತಿದೆ. ಇಸ್ಲಾಮಾಬಾದ್ ಮತ್ತು ಪೇಶಾವರದಲ್ಲಿ, 10 ಕೆಜಿ ಹಿಟ್ಟಿನ ಪ್ರತಿ ಬ್ಯಾಗ್ 1,500 ರೂ.ಗೆ ಮಾರಾಟವಾಗುತ್ತಿದ್ದು, 20 ಕೆಜಿ ಹಿಟ್ಟಿನ ಬ್ಯಾಗ್ 2,800 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್ ಪ್ರಾಂತ್ಯದ ಗಿರಣಿ ಮಾಲೀಕರು ಹಿಟ್ಟಿನ ಬೆಲೆಯನ್ನು ಕಿಲೋಗ್ರಾಂಗೆ 160 ರೂ.ಗೆ ಹೆಚ್ಚಿಸಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಗೋಧಿ ದಾಸ್ತಾನು ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಬಲೂಚಿಸ್ತಾನದ ಆಹಾರ ಸಚಿವ ಜಮಾರಕ್ ಅಚಕ್‌ಝೈ ಹೇಳಿದ್ದಾರೆ. ಬಲೂಚಿಸ್ತಾನಕ್ಕೆ ತಕ್ಷಣವೇ 4,00,000 ಚೀಲ ಗೋದಿ ಅಗತ್ಯವಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಿರಿಜಾ ಲೋಕೇಶ್ ಹುಟ್ಟುಹಬ್ಬದ ಸಂಭ್ರಮ

Tue Jan 10 , 2023
ನಟಿ ಗಿರಿಜಾ ಲೋಕೇಶ್ ಅವರು ಜನವರಿ 10, 1951 ರಂದು ಜನಿಸಿದ್ದಾರೆ.ರಂಗಭೂಮಿ ಕಲಾವಿದರಾಗಿ, ಸಿನಿಮಾ ಲೋಕದಲ್ಲಿ ಮಿಂಚಿದ್ದಾರೆ. ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ.ಗಿರಿಜಾ ಲೋಕೇಶ್ ಕನ್ನಡದ ಹೆಸರಾಂತ ಚಲನಚಿತ್ರ, ರಂಗಭೂಮಿ ಮತ್ತು ಕಿರುತೆರೆ ನಟಿ. ಕಾಕನ ಕೋಟೆ, ದಾಹ, ಭುಜಂಗಯ್ಯನ ದಶಾವತಾರ ಮತ್ತು ಯಾರಿಗೂ ಹೇಳ್ಬೇಡಿ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.ಗಿರಿಜಾ ಲೋಕೇಶ್ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡು ಸ್ಮರಣೀಯ ಅಭಿನಯ ಮಾಡಿದ್ದಾರೆ. ಗಿರಿಜಾ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ಗಮನಾರ್ಹ ಅಭಿನಯ […]

Advertisement

Wordpress Social Share Plugin powered by Ultimatelysocial