ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು.

ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬ ಚಿಕ್ಕವನು. ಆದ್ರೆ, ತುಂಬ ಹೆಮ್ಮೆಯಿಂದ ಒಂದು ವಿಷಯ ಹೇಳೇಕಂದ್ರೆ.. ನಮ್ಮ ಕುಟುಂಬದ ಅಭಿಮಾನಿಗಳು ನಮ್ಮ ತಾತನವರ ಕಾಲದಿಂದ, ಇವತ್ತಿನವರಿಗೂ ಕನ್ನಡ ಚಿತ್ರರಂಗದ ಪ್ರತಿ ಕಲಾವಿದರಿಗೂ ಬೆಂಬಲವಾಗಿ ನಿಂತಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಸಭ್ಯತೆ ಮತ್ತು ಘನತೆಯಿಂದಲೇ ನಡೆದುಕೊಂಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ, ಪ್ರೀತಿ ವಿಶ್ವಾಸವನ್ನು ಹಂಚುವ ಸಂಸ್ಕೃತಿಯುಳ್ಳ ಅಭಿಮಾನಿಗಳೇ ದೇವರು.ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ?ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನ.ಗೌರವಿಸುವುದು, ಎಲ್ಲರನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ, ಅವರ ವ್ಯಕ್ತಿತ್ವ ಎಂದೆಂದಿಗೂ ಎಲ್ಲರಿಗೂ ಮಾದರಿಯಾಗಿ ಇರುತ್ತದೆ. ಅವರ ಬಗ್ಗೆ ಅಗೌರವದಿಂದ ಅವಹೇಳನಕಾರಿಯಾಗಿ ಮಾತನಾಡಿ ಅವರ ಅಭಿಮಾನಿಗಳನ್ನು ಕೆಣಕಿದರೆ, ಅವರ ಭಾವನೆಗಳನ್ನು ನೋಯಿಸಿದರೆ, ಅಭಿಮಾನಿಗಳು ನಿರ್ದಿಷ್ಟ ರೀತಿಯಲ್ಲಿ ಪ್ರತಿಕ್ರಿಯಿಸುವುದು ‘ಬಹಿರಂಗವಾಗಿಯೇ’ ವಿನಃ ನಡೆಯುವ ಪ್ರತಿಯೊಂದು ಘಟನೆಗೂ ಅವರೇ ಕಾರಣಕರ್ತರು ಆಗೋದಿಲ್ಲ.ನಡೆದಿರುವ ಕೃತ್ಯ ಖಂಡನೀಯ. ಯಾರೋ ಮಾಡಿದ ತಪ್ಪನ್ನು ಮತ್ತೊಬ್ಬರ ಮೇಲೆ ಹಾಕುವುದರಿಂದ “ಸುಳ್ಳು ಸತ್ಯವಾಗುವುದಿಲ್ಲ”. ಪೊಲೀಸ್ ತನಿಖೆ ನಡೆಯುತ್ತಿದೆ, ತಪ್ಪಿತಸ್ಥ ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಖಂಡಿತ ಆಗುತ್ತದೆ .ಕಾಣದ ಕೈಗಳು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೂ… ಕಾಣುವ ಬುದ್ದಿ ನಮ್ಮದಾಗಿರಲಿ.ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೇ, ಅವರ ಧ್ವನಿ ನಮ್ಮೆಲ್ಲರ ಶಕ್ತಿ.ಗುರುರಾಯರ ಆಶೀರ್ವಾದ ಎಲ್ಲರ ಮೇಲೆ ಸದಾ ಸಂಪೂರ್ಣವಾಗಿಇರಲಿ .

ಜೈ ಹಿಂದ್ ಜೈ ಕರ್ನಾಟಕ ಮಾತೆ.

– ಯುವ ರಾಜ್‌ಕುಮಾರ್

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಪಿ.ವಿ. ನಾರಾಯಣ ಪ್ರಾಧ್ಯಾಪಕ ಮತ್ತು ಕನ್ನಡಪರ ಹೋರಾಟಗಾರರು.

Thu Dec 22 , 2022
ಡಾ. ಪಿ. ವಿ. ನಾರಾಯಣ ಸಾಹಿತ್ಯದಲ್ಲಿ ಆಳವಾದ ಅಧ್ಯಯನ ನಡೆಸಿ ವೈಜ್ಞಾನಿಕ ದೃಷ್ಟಿಕೋನವನ್ನು ರೂಢಿಸಿಕೊಂಡು ಬಂದಿರುವ ವಿಶಿಷ್ಟ ಸಾಹಿತಿ, ಪ್ರಾಧ್ಯಾಪಕ ಮತ್ತು ಕನ್ನಡಪರ ಹೋರಾಟಗಾರರು. ಪಿ.ವಿ. ನಾರಾಯಣ 1942ರ ಡಿಸೆಂಬರ್ 18ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಪಿ. ವೆಂಕಪ್ಪಯ್ಯ. ತಾಯಿ ನರಸಮ್ಮ. ಪ್ರಾರಂಭಿಕ ಶಿಕ್ಷಣವನ್ನು ಬೆಂಗಳೂರಿನಲ್ಲಿ ನಡೆಸಿದ ಅವರು, ತುಮಕೂರಿನ ಸರಕಾರಿ ಕಾಲೇಜಿನಿಂದ ಬಿ.ಎ, ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಇಂಗ್ಲಿಷ್ ಪದವಿ ಪಡೆದರು. […]

Advertisement

Wordpress Social Share Plugin powered by Ultimatelysocial