ಫೆಬ್ರವರಿ 10ರಂದು ದೇಶದ ಬಹುತೇಕ ನಗರಗಳಲ್ಲಿ ಚಿನ್ನ ಭಾರಿ ಏರಿಕೆ!

ನವದೆಹಲಿ,ಫೆಬ್ರವರಿ 10 : ದೇಶದ ವಿವಿಧ ನಗರಗಳಲ್ಲಿ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ಫೆಬ್ರವರಿ 10ರಂದು ದೇಶದ ಬಹುತೇಕ ನಗರಗಳಲ್ಲಿ ಚಿನ್ನ ಭಾರಿ ಏರಿಕೆ ಕಂಡಿದೆ.22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,800 ರೂ. ಆಗಿದೆ, 24 ಕ್ಯಾರೆಟ್‌ನ ಚಿನ್ನ 49,970ರೂ.ಆಗಿದೆ.ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,970 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಚೆನ್ನೈನಲ್ಲಿ 46,010 ರೂ. ಹಾಗೂ ಅಪರಂಜಿ 50,200 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,700 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.ಎಂಸಿಎಕ್ಸ್‌ನಲ್ಲಿ ಫೆಬ್ರವರಿ 10ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,680.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ1.43ರಷ್ಟುಇಳಿಕೆಯಾಗಿ 1,833.77 ಯುಎಸ್ ಡಾಲರ್‌ನಷ್ಟಿದೆ.ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ 'ಸರ್ಕಾರು ವಾರಿಪಾಟ' ಚಿತ್ರದ ಮೊದಲ ಹಾಡು

Thu Feb 10 , 2022
ಈಗಾಗಲೇ ಟೀಸರ್ ನಿಂದಲೇ ಸಾಕಷ್ಟು ಸದ್ದು ಮಾಡಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ಬಹುನಿರೀಕ್ಷಿತ ‘ಸರ್ಕಾರು ವಾರಿಪಾಟ’ ಚಿತ್ರದ ಮೊದಲ ಹಾಡು ಫೆಬ್ರವರಿ 14ರಂದು ಬಿಡುಗಡೆಯಾಗಲಿದೆ. ‘ಕಲಾವತಿ’ ಎಂಬ ಈ ಹಾಡಿಗೆ ತಮನ್ ಸಂಗೀತವಿದೆ.ಪರಶುರಾಮ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ.ಕೀರ್ತಿ ಸುರೇಶ್ ಈ ಸಿನಿಮಾ ನಾಯಕಿಯಾಗಿದ್ದು, ವೆನ್ನೆಲ ಕಿಶೋರ್, ಸುಬ್ಬರಾಜು […]

Advertisement

Wordpress Social Share Plugin powered by Ultimatelysocial