ಏಪ್ರಿಲ್.5ರಂದು ದೇಶದಲ್ಲಿ ಚಿನ್ನದ ಬೆಲೆ ಸ್ಥಿರ, ಬೆಳ್ಳಿ ದರ ಇಳಿಕೆ!

 

ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಏಪ್ರಿಲ್‌ 5ರಂದು ದೇಶದಲ್ಲಿ ಚಿನ್ನದ ಬೆಲೆ ಸ್ಥಿರವಾಗಿದ್ದರೆ, ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ 47,800 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದೆ.

24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ ಬೆಲೆಯು 52,140 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ ಇಳಿದಿದೆ. ಬೆಳ್ಳಿ ದರವು ಕೆಜಿಗೆ ಪ್ರಸ್ತುತ 300 ರೂ ಇಳಿದಿದ್ದು 66,300 ರೂಪಾಯಿ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ನಡುವೆ ಎಂಸಿಕ್ಸ್ ನಲ್ಲಿ ಏಪ್ರಿಲ್‌ 5ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51551.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.10ರಷ್ಟು ಕುಗ್ಗಿ 1,929.6 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.54ರಷ್ಟು ಏರಿಕೆಯಾಗಿ 24.66 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,140 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,140 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,140 ರೂ. ಇದೆ. ಚೆನ್ನೈನಲ್ಲಿ 48,160 ರೂ. ಹಾಗೂ ಅಪರಂಜಿ 52,540 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,140 ರು ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

Tue Apr 5 , 2022
2019 ರಲ್ಲಿ ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಪತ್ರಕರ್ತರೊಬ್ಬರು ನಟ ಸಲ್ಮಾನ್ ಖಾನ್ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕರೊಬ್ಬರಿಗೆ ನೀಡಿದ್ದ ಸಮನ್ಸ್ ಮತ್ತು ಕ್ರಿಮಿನಲ್ ಮೊಕದ್ದಮೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ಬಾಂಬೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 5 ರಂದು ವಿಚಾರಣೆಗೆ ಹಾಜರಾಗುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಇಬ್ಬರಿಗೆ ಸಮನ್ಸ್ ಜಾರಿ ಮಾಡಿತ್ತು. ಬಾಲಿವುಡ್ […]

Advertisement

Wordpress Social Share Plugin powered by Ultimatelysocial