ಚಿನ್ನದ ಬೆಲೆ 700 ರೂ. ಇಳಿಕೆ:

 

ನವದೆಹಲಿ, ಏಪ್ರಿಲ್ 20: ಭಾರತದ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಮಂಗಳವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಬುಧವಾರ ಭಾರಿ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರದಲ್ಲಿ 700 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ 1,700 ರೂಪಾಯಿ ತಗ್ಗಿದೆ.

ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,620 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 800 ರೂಪಾಯಿ ಏರಿಕೆಯಾಗಿದ್ದು, 68,300 ರೂಪಾಯಿಗೆ ಹೆಚ್ಚಾಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,150 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,620 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,150 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,620 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,150 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,620 ರೂ. ಇದೆ. ಚೆನ್ನೈನಲ್ಲಿ 49,630 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,140 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,150 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,620 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 20ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52435 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.06ರಷ್ಟು ಇಳಿಕೆಯಾಗಿ 1,948.71 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.02ರಷ್ಟು ಇಳಿಕೆಯಾಗಿದ್ದು, 25.11 ಯುಎಸ್ ಡಾಲರ್ ಆಗಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಭಿನ್ನ ಕಥಾಹಂದರ ಹೊಂದಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ.

Thu Apr 21 , 2022
“ರಂಗಿತರಂಗ”, ” ಅವನೇ ಶ್ರೀಮನ್ನಾರಾಯಣ” ಚಿತ್ರದಂತಹ ಉತ್ತಮ ಚಿತ್ರಗಳ ನಿರ್ಮಾಪಕರಾದ ಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಆ ರೊಮ್ಯಾಂಟಿಕ್ ಹಾಡನ್ನು ಕಾಡಿನ ಸುಂದರ ಪರಿಸರದಲ್ಲಿ ನಡೆಸುವ ಯೋಚನೆಯಿದೆ. ಕನ್ನಡದ ಸುಪ್ರಸಿದ್ಧ ನಟಿಯೊಬ್ಬರು ಈ ಹಾಡಿನಲ್ಲಿ ಕಾಣಿಸಿಕೊಳ್ಳಲಿದಾರಂತೆ. ಹಾರಾರ್, ಕಾಮಿಡಿ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು […]

Advertisement

Wordpress Social Share Plugin powered by Ultimatelysocial