Gold Rate Today: ಸತತ 3ನೇ ದಿನವೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಇಷ್ಟಿದೆ ಇಂದಿನ ಬೆಲೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರವೂ (ಸೆಪ್ಟೆಂಬರ್‌ 17) ಬಂಗಾರದ ಬೆಲೆ (Gold Rate Today) ಏರಿಕೆಯಾಗಿದೆ. ಇದರೊಂದಿಗೆ ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆಯಾದಂತಾಗಿದ್ದು, ಖರೀದಿ ಮಾಡುವವರ ಜೇಬಿಗೆ ಕತ್ತರಿ ಬಿದ್ದಿದೆ. ನಗರದಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂಗೆ 20 ರೂ.

ಹಾಗೂ 24 ಕ್ಯಾರಟ್‌ನ ಒಂದು ಗ್ರಾಂಗೆ 22 ರೂ. ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂಗೆ 5,490 ರೂ. ಇದೆ. ಇದು ಶನಿವಾರ 5,470 ರೂ. ಇತ್ತು. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 5,989 ರೂ. ಇದೆ. ಇದು ಶನಿವಾರ 5,967 ರೂ. ಇತ್ತು. ಆ ಮೂಲಕ 24 ಕ್ಯಾರೆಟ್‌ ಚಿನ್ನದ ಬೆಲೆ 22 ರೂ. ಏರಿಕೆಯಾದಂತಾಗಿದೆ.

ಇದರೊಂದಿಗೆ ನಗರದಲ್ಲಿ 24 ಕ್ಯಾರಟ್‌ 10 ಗ್ರಾಂ ಚಿನ್ನದ ದರ 59,890 ರೂ. ಆಗಿದೆ. ಇನ್ನು 22 ಕ್ಯಾರಟ್‌ 10 ಗ್ರಾಂ ಚಿನ್ನದ ಬೆಲೆ 54,900 ರೂ. ಆಗಿದೆ. ಶನಿವಾರ, ಶುಕ್ರವಾರವೂ ಬಂಗಾರದ ಬೆಲೆ ಏರಿಕೆಯಾಗಿತ್ತು. ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಬಂಗಾರದ ಬೆಲೆಯು ಸತತವಾಗಿ ಏರಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

The post Gold Rate Today: ಸತತ 3ನೇ ದಿನವೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಇಷ್ಟಿದೆ ಇಂದಿನ ಬೆಲೆ

Please follow and like us:

tmadmin

Leave a Reply

Your email address will not be published. Required fields are marked *

Next Post

ಗೃಹ ಸಾಲಗಾರರಿಗೆ `RBI' ನಿಂದ ಬಿಗ್ ರಿಲೀಫ್

Sun Sep 17 , 2023
ನವದೆಹಲಿ : ಗೃಹ ಸಾಲಗಾರರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬಿಗ್ ರಿಲೀಫ್ ನೀಡಿದ್ದು, ಇತ್ತೀಚೆಗೆ ಹೊಸ ನಿಯಮಗಳನ್ನು ಹೊರತಂದಿದೆ.ಗೃಹ ಸಾಲ ತೆಗೆದುಕೊಂಡವರಿಗೆ ಇದು ತುಂಬಾ ಪ್ರಯೋಜನಕಾರಿ ಎಂದು ಹೇಳಬಹುದು. ಬಡ್ಡಿಯ ರೂಪದಲ್ಲಿ ದೊಡ್ಡ ಪ್ರಮಾಣದ ಹಣವನ್ನು ಉಳಿಸುವ ಸಾಧ್ಯತೆ ಇದೆ. ಆರ್ಬಿಐ ತಂದ ನಿಯಮಗಳು ಯಾವುವು? ಈಗ ಇವು ಗೃಹ ಸಾಲಗಾರರಿಗೆ ಯಾವ ಪ್ರಯೋಜನಗಳನ್ನು ತರುತ್ತವೆ ಎಂಬುದನ್ನು ಕಂಡುಹಿಡಿಯೋಣ. ಆರ್ಬಿಐ ಆಗಸ್ಟ್ 18 ರಂದು ಅಧಿಸೂಚನೆ ಹೊರಡಿಸಿದೆ. […]

Advertisement

Wordpress Social Share Plugin powered by Ultimatelysocial