ದೇಶದಲ್ಲಿ ಇಳಿಕೆ ಕಂಡ ಚಿನ್ನದ ಬೆಲೆ;

Gold Rate on Jan 12, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,610 ರೂ. ಇತ್ತು. ಇಂದು 20 ರೂ. ಕಡಿಮೆಯಾಗಿ 46,590 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,610 ರೂ. ಇತ್ತು.
ಇಂದು 20 ರೂ. ಕಡಿಮೆಯಾಗಿ 48,590 ರೂ. ಆಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?
ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,760 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,700 ರೂ. ಇದೆ. ಹಾಗೆಯೇ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಮನೆಯಲ್ಲಿ ಹಣದ ತುರ್ತು ಪರಿಸ್ಥಿತಿ ಇದೆಯಾ? ಒಂದೇ ಗಂಟೆಯಲ್ಲಿ Modi Government ವರ್ಗಾಯಿಸುತ್ತೆ ಹಣ!
ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 48,950 ರೂ. ಇದ್ದರೆ, ಮುಂಬೈನಲ್ಲಿ 48,590 ರೂ., ದೆಹಲಿಯಲ್ಲಿ 50,900 ರೂ. ಹಾಗೂ ಕೋಲ್ಕತ್ತದಲ್ಲಿ 49,550 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಇಂದಿನ ಬೆಳ್ಳಿ ದರ:
ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಇಳಿಕೆಯಾಗಿದ್ದರೆ, ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 60,400 ರೂ. ಇತ್ತು. ಇಂದು 400 ರೂ. ಏರಿಕೆಯಾಗಿ 60,800 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 64,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 64,600 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ 60,800 ರೂ. ದರ ಇದೆ.

ಹೂಡಿಕೆಗೆ ಬೆಳ್ಳಿ ಜನಪ್ರಿಯ ವಸ್ತು
ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ರಿಷಭ್ ಪಂತ್ ಹುಡುಗಾಟ;

Wed Jan 12 , 2022
ಟೀಂ ಇಂಡಿಯಾದಲ್ಲಿ ಸದ್ಯ ಬ್ಯಾಟಿಂಗ್ ವಿಭಾಗದ ಚಿಂತೆ ಹೆಚ್ಚಾಗತೊಡಗಿದೆ. ಅದ್ರಲ್ಲೂ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ನಾಯಕ ಕೊಹ್ಲಿ ತಲೆಗೆಡಿಸಿದೆ. ಅನುಭವಿ ಬ್ಯಾಟ್ಸ್‌ಮನ್‌ಗಳಾದ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಸತತ ವೈಫಲ್ಯವು ಟೀಂ ಇಂಡಿಯಾಗೆ ಹೊಡೆತ ನೀಡಿದೆ. ಇದ್ರ ಜೊತೆಗೆ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹುಡುಗಾಟ ತಂಡಕ್ಕೆ ಬೆಲೆ ತೆರುವಂತಾಗಿದೆ. ಹೌದು ಪೂಜಾರ, ರಹಾನೆ ಜೊತೆಗೆ ರಿಷಭ್ ಪಂತ್ ಕೂಡ ಸತತ ಬ್ಯಾಟಿಂಗ್ ವೈಫಲ್ಯ ಕಂಡಿದ್ದಾರೆ. […]

Advertisement

Wordpress Social Share Plugin powered by Ultimatelysocial