ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಭಾರೀ ಇಳಿಕೆಯಾಗಿದೆ.

ದೇಶದಲ್ಲಿಂದು ಚಿನ್ನದ ಬೆಲೆ  ಯಲ್ಲಿ ಭಾರೀ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ   ಸಹ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,500 ರೂ.ಇತ್ತು. ಇಂದು 400 ರೂ. ಇಳಿಕೆಯಾಗಿದ್ದು, 45,100 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,650 ರೂ. ಇತ್ತು. ಇಂದು 450 ರೂ. ಇಳಿಕೆಯಾಗಿ 49,200 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 48,980 ರೂ. ಇತ್ತು. ಇಂದು ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಅದೇ ರೀತಿ 22 ಕ್ಯಾರೆಟ್ 45,100 ರೂ. ಆಗಿದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.ಭಾರತದಲ್ಲಿ ಆಭರಣ ಪ್ರಿಯರ ಜನಸಂಖ್ಯೆ ಕಡಿಮೆ ಏನಿಲ್ಲ. ಚಿನ್ನ, ಬೆಳ್ಳಿ ಆಭರಣ ಧರಿಸಲು, ಮಕ್ಕಳ ಮದುವೆಗೆ, ಇತರೆ ಸಮಾರಂಭಗಳಿಗೆ ಎಂದು ಆಭರಣ ಮಾಡಿಸುವವರು, ಚಿಕ್ಕ ಮಕ್ಕಳಿಗೆ – ಹೀಗೆ ಯಾವುದಾದರೂ ಕಾರಣಕ್ಕೆ ಒಡವೆ ಮಾಡಿಸಿಕೊಳ್ಳುತ್ತಿರುತ್ತಾರೆ. ಹಾಗೆ, ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಾಟ ಮಾಡಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ.ಇತರೆ ನಗರಗಳಲ್ಲಿ ಇಂದಿನ ಚಿನ್ನದ ರೇಟ್ ಎಷ್ಟಿದೆ?ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದ ಆಸುಪಾಸಿನಲ್ಲೇ ಇದೆ. ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 49,450 ರೂ. ಇದ್ದರೆ, ಮುಂಬೈನಲ್ಲಿ 45,100 ರೂ. ಇದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 49,200 ರೂ. ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 49,200 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದ ಆಸುಪಾಸಿನಲ್ಲೇ ಇದೆ.ಇಂದಿನ ಬೆಳ್ಳಿ ದರ:ಬಂಗಾರದ ಬೆಲೆಯಲ್ಲಿ ಏರಿಕೆಯಾಗಿದ್ದರೆ, ಬೆಳ್ಳಿ ದರ  ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 61,400 ರೂ. ಇತ್ತು. ಇಂದು 400 ರೂ. ಇಳಿಕೆಯಾಗಿ 61,000 ರೂ. ಆಗಿದೆ. ಆದರೆ, ಬೆಂಗಳೂರು, ಮೈಸೂರು ಹಾಗೂಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 65,600 ರೂ. ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ 25,000 ಆಶ್ರಯ ಮನೆಗಳನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ!

Sat Feb 5 , 2022
ಬೆಂಗಳೂರು: ರಾಜ್ಯದ ವಿಶೇಷ ವರ್ಗದ ಫ‌ಲಾನುಭವಿಗಳಿಗೆ 25,000 ಆಶ್ರಯ ಮನೆಗಳನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಆದರೆ, ಈ ವರ್ಗದಡಿ ಹಿಂದಿನ ಸರಕಾರದಲ್ಲಿ ಆಯ್ಕೆಯಾದ ಫ‌ಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿ ಹೊಸ ಫ‌ಲಾನುಭವಿಗಳ ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ.ರಾಜ್ಯ ಸರಕಾರ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ವಿಧವೆಯರು, ಅಂಗವಿಕಲರು, ತೃತೀಯ ಲಿಂಗಿಗಳು, ಪರಿತ್ಯಕ್ತರು ಸೇರಿದಂತೆ ಸುಮಾರು 67 ವರ್ಗಗಳ ಜನರಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡುತ್ತದೆ. ಅನೇಕ ವರ್ಷಗಳಿಂದ ಈ ವರ್ಗಗಳ […]

Advertisement

Wordpress Social Share Plugin powered by Ultimatelysocial