ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್!

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆಬ್ರವರಿ 1 ರಿಂದ ಪಡಿತರ ಚೀಟಿದಾರರಿಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಿಸಲು ಆದೇಶಿಸಿದೆ.ರಾಜ್ಯ ಸರ್ಕಾರವು 2023ರ ಜನವರಿಯಿಂದ ರಾಜ್ಯ ಎಲ್ಲಾ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭಿವಿಗೆ ಎನ್‍ಎಫ್‍ಎಸ್‍ಎ ಹಂಚುವ 5 ಕೆ.ಜಿ.ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶಿಸಿದ್ದು, ಸಕಾಲದಲ್ಲಿ ಅಕ್ಕಿ ಸರಬರಾಜು ಲಭ್ಯವಿಲ್ಲದ್ದರಿಂದ ಹಾಗೂ ನ್ಯಾಯಬೆಲೆ ಅಂಗಡಿಗಳ ಬಿಲ್ಲಿಂಗ್ ವ್ಯವಸ್ಥೆ ಮತ್ತು ಪಿಓಎಸ್ ಆರಂಭಗೊಂಡಿರುವ ಕಾರಣ 2023ರ ಫೆಬ್ರವರಿ ಮಾಹೆಯಿಂದ 1 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುವುದು. ಈಗಾಗಲೇ ಆನ್‍ಲೈನ್ ಹಂಚಿಕೆಯಂತೆ ಜನವರಿ-2023ರ ಮಾಹೆಯಲ್ಲಿ ಪ್ರತಿ ಫಲಾನುಭವಿಗೆ ಎನ್‍ಎಫ್‍ಎಸ್‍ಎ 5 ಕೆ.ಜಿ.ಅಕ್ಕಿಯನ್ನು ಮಾತ್ರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧ್ಯದ ಅಂಗಡಿ ಬಂದ ಮಾಡುವಂತೆ ಮಹಿಳೆಯರಿಂದ ಪ್ರತಿಭಟನೆ

Thu Jan 12 , 2023
ಕೂಲಿಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಮದ್ಯದ ಅಂಗಡಿ ಇರುವುದರಿಂದ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಮದ್ಯ ವ್ಯಸನಿಗಳು ರಸ್ತೆಯಲ್ಲಿ ಹೋಗುವ ಮಹಿಳೆಯರನ್ನು ಹಾಗೂ ಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.ಶಾಲೆ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಯುವಕರು ಮದ್ಯವೇಸನಕ್ಕೆ ಅಂಟಿಕೊಳ್ಳುತ್ತಾರೋ ಎಂಬ ಆತಂಕ ಈ ಭಾಗದ ಪಾಲಕರನ್ನು ಕಾಡುತ್ತಿದೆ.ಬೆಳಗ್ಗೆಯಿಂದ ರಾತ್ರಿವರೆಗೂ ಮದ್ಯವ್ಯಸನಿಗಳು ಕುಡಿದ ಬಾಟಲಿಗಳನ್ನು ರಸ್ತೆಯ ಮೇಲೆ ಹಾಗೂ ಶಾಲೆಯಲ್ಲಿ ಎಸೆಯುತ್ತಿರುವುದರಿಂದ ಮಹಿಳೆಯರಿಗೆ ಹಾಗೂ ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾನಿರತ ಮಹಿಳೆ ನಿರ್ಮಲಾ ಹಾಗೂ […]

Advertisement

Wordpress Social Share Plugin powered by Ultimatelysocial