ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್.

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ಈ ಕುರಿತು ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಮಾಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್‌ಉ, ಈ ಮಾಲ್ ನಲ್ಲಿ ರಿಯಾಯತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗುವಂತೆ ಮಾಡಲಾಗುತ್ತದೆ. ಈಗಾಗಲೇ ಶಿವಮೊಗ್ಗದಲ್ಲಿ 22 ಕೋಟಿ ರೂ. ಅನುದಾನದಲ್ಲಿ ಬೃಹತ್ ಭವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ 200 ಕೋಟಿ ರೂ. ಗಳ ಯೋಜನೆಯನ್ನು ರೂಪಿಸಲಾಗುತ್ತಿದೆ. ಇದರಿಂದ ಒಂದೇ ಸೂರಿನಡಿ ರಿಯಾಯತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗಲಿವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ಕನ್ನಡ ಸಾಹಿತ್ಯ ಲೋಕಕ್ಕೆ ಶಾಂತಾದೇವಿ ಕಣವಿ 🤝 ಚನ್ನವೀರ ಕಣವಿ ದಂಪತಿಗಳು ಬಹು ದೊಡ್ಡ ಭಾಗ್ಯ.

Fri Jan 13 , 2023
ಶಾಂತಾದೇವಿಯರು 1933 ವರ್ಷದ ಜನವರಿ 12ರಂದು ವಿಜಾಪುದಲ್ಲಿ ಜನಿಸಿದರು. ತಂದೆ ಸಿದ್ಧಬಸಪ್ಪ ಗಿಡ್ನವರ. ತಾಯಿ ಭಾಗೀರಥಿದೇವಿ. ಕಂದಾಯ ಇಲಾಖೆಯಲ್ಲಿ ಮಾಮಲೆದಾರರಾಗಿದ್ದ ತಂದೆಯವರು ಮುಂಬೈ ಕರ್ನಾಟಕದ ಅಸಿಸ್ಟೆಂಟ್ ಕಮೀಷನರಾಗಿ ನಿವೃತ್ತರಾದವರು. ಅವರಿಗೆ ಅಪಾರವಾದ ಸಾಹಿತ್ಯದ ಒಲವು. ಮನೆಯಲ್ಲಿ ಇಂಗ್ಲಿಷ್, ಕನ್ನಡ ಪುಸ್ತಕಗಳ ದೊಡ್ಡ ಭಂಡಾರವನ್ನೇ ಹೊಂದಿದ್ದರು. ಅವರಲ್ಲಿ ಸಾಹಿತ್ಯ ಮತ್ತು ಅಧ್ಯಾತ್ಮ ಕೃತಿಗಳಿಗೆ ಮೊದಲ ಪ್ರಾಶಸ್ತ್ಯ. ಮಧುರ ಚೆನ್ನರ ಸಹವಾಸದಿಂದ ಅರವಿಂದರ ಅನುಯಾಯಿಗಳು. ಮಾಸ್ತಿ, ಬೇಂದ್ರೆ, ಬೆಟಗೇರಿ ಕೃಷ್ಣಶರ್ಮ, ಶಂಬಾ ಜೋಶಿ, […]

Advertisement

Wordpress Social Share Plugin powered by Ultimatelysocial