ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಕೊಪ್ಪಳ : ಕೊಪ್ಪಳ ಜಿಲ್ಲೆಯ ಆದ್ಯತಾ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಫೆಬ್ರವರಿ-2023ರ ಮಾಹೆಗೆ ಆಹಾರ ಧಾನ್ಯಗಳ ಹಂಚಿಕೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.  ಜಿಲ್ಲೆಯ ಆದ್ಯತಾ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರತಿ ಸದಸ್ಯರಿಗೆ 5 ಕೆಜಿ ಪಡಿತರ ಧಾನ್ಯಗಳ ಹಂಚಿಕೆಯ ಜೊತೆಗೆ ಜನವರಿ-2023ರ ಮಾಹೆಯಿಂದ ಅನ್ವಯವಾಗುವಂತೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ಹಂಚಿಕೆ ನೀಡುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಂದ ಆದೇಶವಾಗಿರುತ್ತದೆ. ಆದರೆ, ನಿಗದಿತ ಅವಧಿಯಲ್ಲಿ ಸಗಟು ಮಳಿಗೆಗೆ ಎತ್ತುವಳಿಯಾಗದ ಕಾರಣ ಫೆಬ್ರವರಿ-2023ರ ಮಾಹೆಯಲ್ಲಿ ಜನವರಿ-2023 ಮಾಹೆಯ 1 ಕೆಜಿ ಅಕ್ಕಿ ಹಾಗೂ ಫೆಬ್ರವರಿ-2023ರ ಮಾಹೆಯ 1 ಕೆಜಿ ಅಕ್ಕಿ ಸೇರಿ ಒಟ್ಟು 2ಕೆಜಿ ಅಕ್ಕಿಯೊಂದಿಗೆ ಎನ್.ಎಫ್.ಎಸ್.ಎ 5 ಕೆಜಿ ಅಕ್ಕಿಯನ್ನು ಸೇರಿಸಿ ಒಟ್ಟು 07 ಕೆ.ಜಿ ಅಕ್ಕಿಯನ್ನು ಫೆಬ್ರವರಿ-2023ರ ಮಾಹೆಯಲ್ಲಿ ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರಿಗೆ ಹಂಚಿಕೆ ನೀಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆಜಿ ಅಕ್ಕಿ ಇದ್ದು ಹಂಚಿಕೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಆಹಾರಧಾನ್ಯಗಳ ಹಂಚಿಕೆ ಪ್ರಮಾಣ : ಫೆಬ್ರವರಿ-2023ರ ಮಾಹೆಗೆ ಜಿಲ್ಲೆಯ ಪಡಿತರ ಚೀಟಿದಾರರಿಗೆ ಪಡಿತರ ಧಾನ್ಯಗಳ ಹಂಚಿಕೆ ಪ್ರಮಾಣದ ವಿವರ ಇಂತಿದೆ. ಆದ್ಯತಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಉಚಿತವಾಗಿ 7 ಕೆಜಿ ಅಕ್ಕಿ (5 ಕೆಜಿ+ 1 ಕೆಜಿ+1 ಕೆಜಿ), ಅಂತ್ಯೋದಯ (ಎಎವೈ) ಪ್ರತಿ ಚೀಟಿಗೆ ಉಚಿತ 35 ಕೆಜಿ ಅಕ್ಕಿ, ಆದ್ಯತೇತರ (ಎಪಿಎಲ್) ಚೀಟಿದಾರರಿಗೆ ಪ್ರತಿ ಕೆಜಿಗೆ 15 ರೂ.ನಂತೆ 10 ಕೆಜಿ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ ಪ್ರಕಟಣೆ ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್​ನಲ್ಲಿ ಸಿಕ್ಕಿದ್ದೇನು?

Fri Feb 17 , 2023
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ. 1. ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಆರೋಗ್ಯ ಸೇವೆಗಳನ್ನು ತಳಹಂತದಲ್ಲಿಯೂ ಬಲಪಡಿಸಲು ಹಾಗೂ ಜನರಿಗೆ ಸ್ಥಳೀಯವಾಗಿ, ಸುಲಭವಾಗಿ ತಜ್ಞರ ಸೇವೆಯನ್ನು ಒದಗಿಸಲು 2022-23ನೇ ಸಾಲಿನಲ್ಲಿ ಘೋಷಿಸಿದಂತೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ […]

Advertisement

Wordpress Social Share Plugin powered by Ultimatelysocial