ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :

ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮ ಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹೌದು, ಎಲ್ಲಾ ವಿಷಯಗಳಲ್ಲೂ 1 ಅಂಕದ ಪ್ರಶ್ನೆ ಗಳನ್ನು 20ಕ್ಕೆ ಹೆಚ್ಚಿಸಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.ಈ ಮೂಲಕ ಮಕ್ಕಳು ಸುಲಭವಾಗಿ ಉತ್ತರಿಸುವಂತೆ 2, 3, 4, 5 ಮತ್ತು 6 ಅಂಕಗಳ ಇಳಿಸಲಾಗಿದೆ. ಪ್ರಶ್ನೆಗಳ ಸಂಖ್ಯೆಯನ್ನು ವಿಷಯವಾರು ಹೆಚ್ಚು ಕಡಿಮೆ ಮಾಡಲಾಗಿದೆ. ಬಿಟ್ಟ ಸ್ಥಳ ಭರ್ತಿ ಮಾಡುವುದು, ಹೊಂದಿಸಿ ಬರೆಯುವುದು ಹೀಗೆ ಮಕ್ಕಳಿಗೆ ಉತ್ತಮವಾಗಿ ಉತ್ತರಿಸಲು ಸಾಧ್ಯವಾಗುವ ಪ್ರಶ್ನೆಗಳ ಮಾದರಿಯನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಮಕ್ಕಳು ಪ್ರಶ್ನೆಗೆ ಸುಲಭವಾಗಿ ಉತ್ತರಿಸಿ ಹೆಚ್ಚು ಅಂಕ ಪಡೆಯಲು ಸಾಧ್ಯವಾಗುತ್ತದೆ ಎಂಬುದು ಶಿಕ್ಷಣ ಇಲಾಖೆಯ ಅಭಿಪ್ರಾಯ. ಸುಲಭವೂ ಅಲ್ಲದ ಕಷ್ಟವೂ ಅಲ್ಲದ ಪ್ರಶ್ನೆಗಳ ಪ್ರಮಾಣವನ್ನು ಶೇ.40ಕ್ಕೆ ಮತ್ತು ಕಷ್ಟದ ಪ್ರಶ್ನೆಗಳ ಪ್ರಮಾಣವನ್ನು ಶೇ.20ಕ್ಕೆ ಇಳಿಸಲಾಗಿದೆ, ಶೇ.35ರಷ್ಟು ಜ್ಞಾನಾಧಾರಿತ ಪ್ರಶ್ನೆ, ಶೇ.30ರಷ್ಟು ತಿಳುವಳಿಕೆ ಸಾಮರ್ಥ್ಯದ ಪ್ರಶ್ನೆ ಶೇ.25ರಷ್ಟು ಅನ್ವಯಿಸು ವಿಕೆ ಶೇ.10ರಷ್ಟು ಕೌಶಲ್ಯಾಧಾ ರಿತ ಪ್ರಶ್ನೆಗಳನ್ನು ಒಳಗೊಂಡಿರುವಂತೆ ಪ್ರಶ್ನೆ ಪತ್ರಿಕೆ ಮಾದರಿ ಸಿದ್ಧಪಡಿಸಲಾಗಿದೆ. ಈ ಮೂಲಕ ಪಿಯುಸಿ ಫಲಿತಾಂಶವನ್ನು ಹೆಚ್ಚಿಸುವಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನೂ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂಬುದಾಗಿ ಬದಲಾವಣೆ ಮಾಡಲಾಗಿದೆ. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಮಂಡಳಿಯ ವೆಬ್ ಸೈಟ್ ವಿಳಾಸವನ್ನು ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಎಸ್ ಎಸ್ ಎಲ್ ಸಿ ಬೋರ್ಡ್ ಅನ್ನು ( SSLC Board ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಪ್ರತಿಯೋಜಿಸಲಾಗಿದ್ದು, ಮಂಡಳಿಯ ಜಾಲತಾಣವಾದ ಗೆ ಪರ್ಯಾಯವಾಗಿ ಇ-ಆಡಳಿತ ಕೇಂದ್ರ ನೆರವಿನಿಂದ   ಅಭಿವೃದ್ಧಿ ಪಡಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಒದಗಿಸಲಾಗಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಷ್ಟ್ರೀಯ ಯುವ ದಿನ;

Thu Jan 12 , 2023
  ಯುವ ಸಮೂಹದ ಅಪೇಕ್ಷೆ ಮತ್ತು ನಿರೀಕ್ಷೆ ಇಂದಿನ ಕಾಲಘಟ್ಟದಲ್ಲಿ ಅಗಾಧವಾಗಿದೆ. ದೇಶದಲ್ಲಿ ಶೇ. 40ರಷ್ಟು ಇರುವ ಯುವ ಸಮೂಹ ಹೊಸ ಕಾಲಮಾನದ ಆಧುನಿಕ ಅಭಿವೃದ್ಧಿಯ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಡಿಜಿಟಲ್ ಯುಗದ ಅಪೇಕ್ಷೆಯನ್ನು ಬಯಸುತ್ತದೆ. ದೇಶದ ಸಮಗ್ರ ಇತಿಹಾಸದ ಭವಿಷ್ಯದ ಭಾರತವನ್ನು ಯುವ ಪೀಳಿಗೆಗೆ ಕಟ್ಟಿಕೊಡುವ ಕೆಲಸವನ್ನು ಯುವ ಮುಖಂಡರಾದವರು ಮಾಡಬೇಕಾಗುತ್ತದೆ. ವಿಶ್ವದಲ್ಲಿ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಮಹಾನ್ ರಾಷ್ಟ್ರ ಎನಿಸಿಕೊಂಡ ಭಾರತದ ಯುವ ಸಮುದಾಯದಲ್ಲಿ ಅಗಾಧವಾದ ಶಕ್ತಿ ಇದೆ. […]

Advertisement

Wordpress Social Share Plugin powered by Ultimatelysocial