ವಿಕಲಚೇತನರಿಗೆ ಗುಡ್ ನ್ಯೂಸ್ :

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಜಿಲ್ಲೆಯಲ್ಲಿ ಕೆಲವು ವಿಕಲಚೇತನರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವುದು ಕಂಡು ಬಂದಿರುತ್ತದೆ. ಆದರೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ವಿಲೇ ಮಾಡಲು ತಾಂತ್ರಿಕ ಸಮಸ್ಯೆ ಎದುರಾಗುತ್ತಿರುವ ಹಾಗೂ ಆರ್ಥಿಕ ವರ್ಷ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಆನ್‌ಲೈನ್ ಮೂಲಕ ವಿಲೇ ಮಾಡಲು ಸಮಯದ ಅಭಾವವಿರುವುದರಿಂದ ಪ್ರಸಕ್ತ ಸಾಲಿನಲ್ಲಿ ಭೌತಿಕವಾಗಿ (ಆಫ್‌ಲೈನ್) ವಿಲೇ ಮಾಡಲಾಗುವುದು.

ಫಲಾನುಭವಿಗಳಿಗೆ ಇರಬೇಕಾದ ಅರ್ಹತೆಗಳು : ಫಲಾನುಭವಿಗೆ ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇರತಕ್ಕದ್ದು, ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.11,500/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.24,000/- ಗಳನ್ನು ಮೀರಿರಬಾರದು, ಅರ್ಜಿದಾರರು ಕನಿಷ್ಟ ಕೆಳದ 10 ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವೀರಬೇಕು, ಅರ್ಜಿದಾರರು ಬ್ಯಾಂಕ್‌ಗಳಿಗೆ ಹಾಗೂ ಸರ್ಕಾರಕ್ಕೆ ಈ ಹಿಂದೆ ಸುಸ್ತಿದಾರರಾಗಿರಬಾರದು. (ಬ್ಯಾಂಕ್‌ ಗಳಿಂದ ಬೇಬಾಕಿ ಪ್ರಮಾಣ ಪತ್ರ ಲಗತ್ತಿಸಬೇಕು.), ಫಲಾನುಭವಿಗೆ ಕನಿಷ್ಠ 18 ರಿಂದ 55 ವರ್ಷದೊಳಗಿರಬೇಕು, ಅಂಗವಿಕಲತೆ ಹೊಂದಿರುವ ಬಗ್ಗೆ ಸಂಬಂಧ ಪಟ್ಟ ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ಅಂಗವಿಕಲರ ಗುರುತಿನ ಚೀಟಿ/ಯು.ಡಿ.ಐ.ಡಿ. ಕಾರ್ಡ್ ಜೆರಾಕ್ಸ್ ಪ್ರತಿ, ಈ ಹಿಂದೆ ಆಧಾರ/ಎನ್.ಹೆಚ್.ಎಫ್.ಡಿ.ಸಿ./ಹಿಂದುಳಿದ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಇತರೆ ಯಾವುದೇ ಸರ್ಕಾರ/ಸಂಘ-ಸಂಸ್ಥೆಗಳಿಂದ ಸಾಲ ಸೌಲಭ್ಯ ಪಡೆದಿರಬಾರದು, ಬ್ಯಾಂಕ್‌ನ ಪಾಸ್ ಬುಕ್ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ ಲಗತ್ತಿಸಬೇಕು.

ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ಪುರಸಭೆ, ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ರವರಿಂದ ನಿಗಧಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ವಿಕಲಚೇತನರ ಸಹಾಯವಾಣಿ ಕೇಂದ್ರ: 080-29787441 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಕಾಶ್ ರಾಜ 1994 ರಲ್ಲಿ ದಕ್ಷಿಣದ ಪ್ರಸಿದ್ಧ ನಟಿ ಲಲಿತಾ ಕುಮಾರಿ ಅವರನ್ನು ವಿವಾಹವಾದರು.

Tue Jan 24 , 2023
ಪ್ರಕಾಶ್ ರಾಜ 1994 ರಲ್ಲಿ ದಕ್ಷಿಣದ ಪ್ರಸಿದ್ಧ ನಟಿ ಲಲಿತಾ ಕುಮಾರಿ ಅವರನ್ನು ವಿವಾಹವಾದರು. ಲಲಿತಾ ಕುಮಾರಿ ತಮಿಳಿನ ಖ್ಯಾತ ನಾಯಕಿಯರಲ್ಲಿ ಒಬ್ಬರು. ಖ್ಯಾತ ನಟ ಸಿ.ಎಲ್.ಆನಂದನ್ ಅವರ ಪುತ್ರಿ. ಅವರು 30 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಆ ಕಾಲದ ಅತ್ಯಂತ ಜನಪ್ರಿಯ ನಟಿಯಾಗಿದ್ದರು. 1987-95ರವರೆಗೆ ಅವರು ಬೆಳ್ಳಿ ಪರದೆಯ ಮೇಲೆ ತುಂಬಾ ಸಕ್ರಿಯರಾಗಿದ್ದರು. ಆದರೆ ಪ್ರಕಾಶ್ ಅವರನ್ನು ಮದುವೆಯಾದ ನಂತರ, ಅವರು ಸಿನಿಮಾಗಳಿಂದ ದೂರವಿದ್ದರು. […]

Advertisement

Wordpress Social Share Plugin powered by Ultimatelysocial