ಆರ್ಥಿಕವಾಗಿ ಹಿಂದುಳಿದವರಿಗೆ ಸಿಹಿ ಸುದ್ದಿ.

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸಿಹಿ ಸುದ್ದಿಯನ್ನು ಇಂದು ಮಂಡನೆಯಾಗುತ್ತಿರುವ ರಾಜ್ಯ ಬಜೆಟ್‌ನಲ್ಲಿ ನೀಡಲಾಗಿದ್ದು, ನೆಲೆ ಯೋಜನೆ ಅಡಿಯಲ್ಲಿ ವಸತಿ ಯೋಜನೆ ಅಡಿಯಲ್ಲಿ ಹತ್ತು ಸಾವಿರ ಸೈಟ್‌ ವಿತರಣೆ ಮಾಡುವುದಾಗಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿವರು ಹೇಳಿದ್ದಾರೆ.

ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊದಲ ಬಾರಿ ಅದ್ದೂರಿ ಶಿವರಾತ್ರಿ ಆಚರಣೆ

Fri Feb 17 , 2023
ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇತ್ತೀಚೆಗೆ ಅನಾವರಣಗೊಂಡ 112 ಅಡಿಗಳ ಆದಿಯೋಗಿ ಪ್ರತಿಮೆ ವೀಕ್ಷಿಸಲು ಪ್ರತಿನಿತ್ಯ ಹಲವಾರು ಮಂದಿ ಭೇಟಿ ನೀಡುತ್ತಿದ್ದಾರೆ. ಅದಲ್ಲದೆ ಈ ವರ್ಷ ಪ್ರಥಮ ಬಾರಿಗೆ ಇಲ್ಲಿ ಶಿವರಾತ್ರಿ ನಡೆಯುತ್ತಿದ್ದು, ಸಕಲ ಸಿದ್ಧತೆಗಳು ಕೂಡ ವಿಜೃಂಭಣೆಯಿಂದ ನಡೆಯುತ್ತಿದೆ. ಶಿವರಾತ್ರಿಯಂದು ಚಿಕ್ಕಬಳ್ಳಾಪುರದ ಆದಿಯೋಗಿ ಪ್ರತಿಮೆಯನ್ನು ವೀಕ್ಷಿಸಲು ನೀವು ಯೋಚಿಸತ್ತಿದ್ದರೆ, ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ. ಕಾರ್ಯಕ್ರಮದ ವಿಶೇಷತೆ : 112 ಅಡಿಗಳ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ […]

Advertisement

Wordpress Social Share Plugin powered by Ultimatelysocial