ನಿರುದ್ಯೋಗಿ ಯುವಜನರಿಗೆ ಗುಡ್‌ನ್ಯೂಸ್‌: ಡಿ.23ರಂದು ಚಿತ್ರದುರ್ಗದಲ್ಲಿ ಉದ್ಯೋಗ ಮೇಳ.

ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಇ, ಬಿಬಿಎಂ, ಎಂಬಿಎ, ಸ್ನಾತಕೋತ್ತರ ಪದವಿ ಇತರೆ ಪದವಿ ಹೊಂದಿದ ಪಾಸ್/ಫೇಲ್ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಎಲ್ಲಾ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ನೇರ ಸಂದರ್ಶನದ ಪ್ರಯೋಜನ ಪಡೆಯಬಹುದಾಗಿದೆ.ನಿರುದ್ಯೋಗಿ ಯುವಕ ಯುವತಿಯರಿಗೆ ಸುವರ್ಣಾವಕಾಶ ದೊರೆತಿದ್ದು, ಇಲ್ಲಿನ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

Basavaraj Bommai: ಮಹಿಳೆಯರ ಏಳಿಗೆಗಾಗಿ ಒನಕೆ ಓಬವ್ವ ನಿಗಮ ರಚನೆ: ಬಸವರಾಜ ಬೊಮ್ಮಾಯಿ

Wed Dec 28 , 2022
Basavaraj Bommai On Onake Obavva – ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಯಿ ಘೋಷಿಸಿದ್ದಾರೆ. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ವೀರ ವನಿತೆ ಓಬವ್ವ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಓಬವ್ವ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ 80 ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಒನಕೆ […]

Advertisement

Wordpress Social Share Plugin powered by Ultimatelysocial