Govt:ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ಉಪಗ್ರಹ ವಿನ್ಯಾಸ, ಉಡಾವಣೆ;

Bengaluru: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹವೊಂದನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಶುಕ್ರವಾರ ಒಪ್ಪಿಗೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.

ಅಶ್ವತ್ಥ್ ನಾರಾಯಣ್ ಅವರು, ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹವೊಂದನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.

‘ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಗ್ರಹ- ಕೆಜಿಎಸ್ 3 ಸ್ಯಾಟ್ (Karnataka Government School Students Satellite- KGS3Sat)ಎಂಬ ಹೆಸರಿನ ಯೋಜನೆಯನ್ನು ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ (ಐಟಿಸಿಎ) ಸಹಯೋಗದೊಂದಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ (ಕೆಎಸ್‌ಟಿಇಪಿಎಸ್) ಮೂಲಕ ಜಾರಿಗೊಳಿಸಲಾಗುವುದು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಚಾರ ಸೊಸೈಟಿ, ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ ನೊಂದಿಗೆ ಎಂಒಯುಗೆ ಪ್ರವೇಶಿಸಲಿದೆ.

ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರ ಅಂಗವಾಗಿ ಬೆಂಗಳೂರಿನ ಆಯ್ದ ಒಂದು ಸರ್ಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾವಣೆ ಮಾಡಲಾಗುತ್ತದೆ.

ಯೋಜನೆಯನ್ನು ಪೂರ್ಣಗೊಳಿಸಲು 12 ತಿಂಗಳ ಕಾಲಾವಕಾಶ ನೀಡಲಾಗಿದ್ದು, ಅದರ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ತಾಂತ್ರಿಕ ತಜ್ಞರ ಸಮಿತಿಯನ್ನು ಸ್ಥಾಪಿಸಲಾಗುವುದು. 75 ವರ್ಷಗಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡಾವಣೆಯಾಗಲಿರುವ 75 ನ್ಯಾನೊ ಉಪಗ್ರಹಗಳಲ್ಲಿ ಇದೂ ಕೂಡ ಒಂದಾಗಲಿದೆ ಎಂದು ತಿಳಿಸಿದ್ದಾರೆ.

ಯೋಜನೆಯ ಭಾಗವಾಗಿ 75 ನ್ಯಾನೊ-ಉಪಗ್ರಹಗಳನ್ನು ವಿನ್ಯಾಸಗೊಳಿಸಲು ಮತ್ತು ಉಡಾವಣೆ ಮಾಡಲು ಅರ್ಜಿ ಸಲ್ಲಿಸುವಂತೆ ಈ ಹಿಂದೆಯೇ ದೇಶದಾದ್ಯಂತ ಹಲವಾರು ವಿದ್ಯಾರ್ಥಿ ಸಮೂಹಗಳಿಗೆ ಆಹ್ವಾನ ನೀಡಲಾಗಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BOLLYWOOD:ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ;

Sat Jan 22 , 2022
ಮುಂಬಯಿ: ಪನ್ವೇಲ್‌ನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್ ಬಳಿ ಜಮೀನು ಹೊಂದಿರುವ ಕೇತನ್ ಕಕ್ಕಡ್ ಎಂಬ ವ್ಯಕ್ತಿಯ ವಿರುದ್ಧ ಸಲ್ಮಾನ್ ಖಾನ್ ತನ್ನ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಮೊಕದ್ದಮೆ ಹೂಡಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಕೇತನ್, ಸಲ್ಮಾನ್ ಖಾನ್ ವಿರುದ್ಧ ಮಕ್ಕಳ ಕಳ್ಳಸಾಗಣೆ ಆರೋಪಗಳನ್ನು ಮಾಡಿದ್ದರು ಮತ್ತು ಅವರ ಫಾರ್ಮ್‌ಹೌಸ್‌ನಲ್ಲಿ ಚಲನಚಿತ್ರ ತಾರೆಯರ ಶವಗಳನ್ನು ಹೂಳಲಾಗಿದೆ ಎಂದು […]

Advertisement

Wordpress Social Share Plugin powered by Ultimatelysocial