ರಾಜ್ಯದ 35 ಸಾವಿರ ಮುಜರಾಯಿ ದೇವಸ್ಥಾನಗಳ ಸಮಗ್ರ ಸಮೀಕ್ಷೆ

 ರಾಜ್ಯದ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳ ಸಮಗ್ರ ಆಸ್ತಿಯನ್ನೂ ಸಮೀಕ್ಷೆ ನಡೆಸಲು ಮಹತ್ವದ ತೀರ್ಮಾನ ಮಾಡಲಾಗಿದೆ.ದೇವಸ್ಥಾನದ ಆಸ್ತಿ ಸಂರಕ್ಷಣೆಯ ಪ್ರಮುಖ ಉದ್ದೇಶದಿಂದ, ರಾಜ್ಯದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳು ಮತ್ತು ಅವುಗಳ ಆಸ್ತಿ ವಿವರಗಳನ್ನು ಸಮಗ್ರ ಸಮೀಕ್ಷೆ ಮಾಡಲು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಧರಿಸಲಾಗಿದೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯ ನಂತರ ಮಾತನಾಡಿದ ಸಚಿವೆ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಎ, ಬಿ ಮತ್ತು ಸಿ ದರ್ಜೆಯ 35 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಇವು ನಮ್ಮ ಗೆಜೆಟ್‌ನ ಪಟ್ಟಿಯಲ್ಲಿ ನಮೂದಾಗಿವೆ. ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಂರಕ್ಷಣೆ, ದೇವಾಲಯಗಳ ಸಮಗ್ರ ಮಾಹಿತಿಯನ್ನು ಕಲೆ ಹಾಕುವುದು ಹಾಗೂ ಅವುಗಳ ವಾಸ್ತವಿಕ ಸಮೀಕ್ಷೆ ನಡೆಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಾದ ವಿಶೇಷ ಅನುದಾನವನ್ನು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು ಎಂದು ತಿಳಿಸಿದರು.ದೇವಸ್ಥಾನಗಳ ಸಮಗ್ರ ಸಮೀಕ್ಷೆಯನ್ನು ಆಧುನಿಕ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಮಾಡಲಾಗುವುದು. ನಮ್ಮ ಪಟ್ಟಿಯಲ್ಲಿರುವ ದೇವಸ್ಥಾನಗಳ ಬಳಿ ತೆರಳುವುದು, ಅವುಗಳ ವಾಸ್ತವಿಕ ಚಿತ್ರಣವನ್ನು ಡಿಜಿಟಲ್‌ ಆಗಿ ನಮೂದಿಸುವುದು ಹಾಗೂ ಅವುಗಳಲ್ಲಿರುವ ಆಸ್ತಿಗಳ ವಾಸ್ತವಿಕ ಸ್ಥಿತಿ ಗತಿಯ ಬಗ್ಗೆ ಮಾಹಿತಿ ಕಲೆ ಹಾಕುವುದನ್ನು ಮಾಡಲಾಗುವುದು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಪರೇಷನ್‌ಗೆ ಇಳಿಯಲಿದ್ದಾರೆ ಅಮಿತ್‌ ಶಾ

Fri Dec 30 , 2022
ವಿಧಾನಸಭೆ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸಲು ಆ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಡಿಸೆಂಬರ್‌ 30ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.ಈ ಕುರಿತು ನವದೆಹಲಿಯಲ್ಲಿ ಸಭೆ ನಡೆಸಿದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಂಡ್ಯದಲ್ಲಿ ಹಾಲು ಉತ್ಪಾದಕರ ಕಟ್ಟಡ ಉತ್ಪಾದನೆ ನೆಪದಲ್ಲಿ ಆಗಮಿಸುತ್ತಿರುವ ಅಮಿತ್‌ ಶಾ, ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಒತ್ತು ನೀಡಲಿದ್ದಾರೆ. ನಂತರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಿಲ್ಲಾ ಪ್ರಮುಖರ ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial