ಕೊನೆಗೆ ಯಾರಿಗೂ ಮೀಸಲಾತಿ ಸಿಗದಂತೆ ಮಾಡುವುದೇ ಬಿಜೆಪಿ ಸರ್ಕಾರದ ಉದ್ದೇಶ

ಕೊನೆಗೆ ಯಾರಿಗೂ, ಯಾವ ಸಮುದಾಯದವರಿಗೂ ಮೀಸಲಾತಿ ಸಿಗದಂತೆ ಮಾಡುವುದೇ ರಾಜ್ಯ ಬಿಜೆಪಿ ಸರ್ಕಾರದ ಉದ್ದೇಶ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ(ಕೆಪಿಸಿಸಿ) ಡಿಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಬೆಳಗಾವಿ: ಕೊನೆಗೆ ಯಾರಿಗೂ, ಯಾವ ಸಮುದಾಯದವರಿಗೂ ಮೀಸಲಾತಿ ಸಿಗದಂತೆ ಮಾಡುವುದೇ ರಾಜ್ಯ ಬಿಜೆಪಿ ಸರ್ಕಾರದ ಉದ್ದೇಶ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ(ಕೆಪಿಸಿಸಿ) ಡಿಕೆ ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.ರಾಜ್ಯ ಸರ್ಕಾರ ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ ಸೃಷ್ಟಿ ಮಾಡಿದ ಬಗ್ಗೆ ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ರಾಜ್ಯ ಸರ್ಕಾರ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಯಾರಿಗೂ ಮೀಸಲಾತಿ ಸಿಗಬಾರದು. ಎಲ್ಲರೂ ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ದಾವೆ ಹೂಡವಂತಾಗಬೇಕು ಎಂಬುದೇ ಅವರ ತಂತ್ರವಾಗಿದೆ ಎಂದರು.ಮೀಸಲಾತಿ ಹೆಸರಿನಲ್ಲಿ ಅನಗತ್ಯ ಗೊಂದಲ ನಿರ್ಮಾಣ ಮಾಡಿದ್ದಾರೆ.ಕಾನೂನಿನಲ್ಲಿ ಈ ರೀತಿ ಮಾಡಲು ಅವಕಾಶ ಎಲ್ಲಿದೆ? ಸಮಾಜದವರು ಯಾರ್ಯಾರು ಏನೇನು ಮೀಸಲಾತಿ ಕೇಳ್ತಾರೆ ಅವರಿಗೆ ಕೊಡಬೇಕು. ಅವರು ಕೇಳಿದಷ್ಟು ಪರ್ಸೆಂಟೇಜ್ ಮೀಸಲಾತಿ ಕೊಡಬೇಕು. ಕೊನೆಗೆ ಎಲ್ಲಾ ಕೋರ್ಟ್ಗೆ ಹೋಗಿ ಲಿಟಿಗೇಷನ್ ಹಾಕಬೇಕು ಎಂಬುದು ಅವರ ಉದ್ದೇಶ ಎಂದರು.ಮೀಸಲಾತಿ ವಿಚಾರದಲ್ಲಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ರಾಜ್ಯದ ಸಿಎಂ ನೇರವಾಗಿ ಬಂದು ಮಾತನಾಡಬೇಕಿತ್ತು. ಕ್ಯಾಬಿನೆಟ್ ಬಳಿಕ ಎಷ್ಟು ಪರ್ಸೆಂಟೇಜ್ ನೀಡಿದ್ದೇವೆಂದು ತಿಳಿಸಬೇಕಿತ್ತು. ಒಕ್ಕಲಿಗರು 12 ಪರ್ಸೆಂಟ್ ಮೀಸಲಾತಿ ಕೇಳುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭಿಷೇಕ್ ಅಂಬರೀಶ್ 'ಕೈ' ಅಭ್ಯರ್ಥಿ?

Sat Dec 31 , 2022
  ಮೈಸೂರು ಜಿಲ್ಲೆಯಲ್ಲಿ ಪ್ರತಿಷ್ಠೆಯ ಕಣವಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಟ, ಮಾಜಿ ಸಚಿವ ಅಂಬರೀಶ್ ಅವರ ಪುತ್ರ ಅಭಿಷೇಕ್ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೆರೆಯ ಹಿಂದೆ ಮಾತುಕತೆ ಆರಂಭವಾಗಿದೆ.ಮೈಸೂರಿನ ಚಾಮುಂಡೇಶ್ವರಿ ವಿಧಾನಸಬಾ ಕ್ಷೇತ್ರ ಈಗ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿ ಪರಿಣಮಿಸಿದ್ದು, ಜಾತ್ಯತೀತ ಜನತಾದಳದ ಜಿ.ಟಿ.ದೇವೇಗೌಡರ ವಿರುದ್ಧ ಅಭಿಷೇಕ್ ಗೌಡ ಅವರನ್ನು ಕಣಕ್ಕಿಳಿಸುವುದು ಕಾಂಗ್ರೆಸ್ ನಾಯಕರ ಯೋಚನೆ.ಈ ಹಿನ್ನೆಲೆಯಲ್ಲಿ ಸಂಸದರಾದ ಸುಮಲತಾ ಅವರನ್ನು ಸಂಪರ್ಕಿಸಿರುವ ಕಾಂಗ್ರೆಸ್ […]

Advertisement

Wordpress Social Share Plugin powered by Ultimatelysocial